Mysore
27
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಕಾಂಗ್ರೆಸ್ ಗೆಲುವು ಅನಿವಾರ್ಯ : ಮಂಜುನಾಥ್ ಅಣ್ಣಯ್ಯ!

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದಲಿತ ಸಂಘರ್ಷ ಸಮಿತಿಯು ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಮಂಜುನಾಥ್ ಅಣ್ಣಯ್ಯ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಿರುವ ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾಯಿಸಿ ಹಿಂದೂ ಧರ್ಮದ ಹೆಸರಿನಲ್ಲಿ, ಧರ್ಮ ಸಂಸತ್ ಸ್ಥಾಪಿಸಿ ಅದರ ಮೇಲೆ ಹಿಡಿತ ಸಾಧಿಸುವುದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಗುರಿಯಾಗಿದೆ.

ಹೀಗಾಗಿ ಸುಮಾರು ೪೦೦ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂದು ಅಪಾರ ಅಕ್ರಮ ಹಣವನ್ನು ಸಂಗ್ರಹಿಸಿಕೊಂಡಿದ್ದಾರೆ. ಮಾಧ್ಯಮಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯತ್ನಿಸುವುದರೊಡನೆ ಇಡಿ, ಐಟಿ, ಸಿಬಿಐ ದಾಳಿಗಳ ಮೂಲಕ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದ ದುಡಿಯುವ ಜನರು, ದಮನಿತ ಸಮುದಾಯಗಳು, ಅಲ್ಪಸಂಖ್ಯಾತರು, ಪ್ರಜ್ಞಾವಂತರು ಒಂದಾಗುವ ಮೂಲಕ ಷಡ್ಯಂತ್ರ ವಿಫಲಗೊಳಿಸಲು ಶ್ರಮಿಸುತ್ತಿದ್ದಾರೆ.

ಹೀಗಾಗಿ ಕಾಂಗ್ರೆಸ್ ವಿರುದ್ಧದ ನಿಸ್ತೇಜ ಮಾತುಗಳನ್ನು ತಿರಸ್ಕರಿಸುವ ಮೂಲಕ ಅದಕ್ಕೆ ಬೆಂಬಲ ನೀಡಬೇಕು. ಈ ಮೂಲಕ ಸಂವಿಧಾನ ರಕ್ಷಣೆಗೆ ಮುಂದಾಗಬೇಕು. ಇನ್ನು, ರಾಜ್ಯದಲ್ಲಿ ದಲಿತ ಸಿಎಂ ವಿಷಯ ಈ ಸಂದರ್ಭದಲ್ಲಿ ಪ್ರಸ್ತುತವಲ್ಲ ಎಂದರು.

ಪದಾಧಿಕಾರಿಗಳಾದ ವಸಂತ್, ಪ್ರಶಾಂತ್, ರವಿ, ವಿನೋದ್ ಚಾಕೋ, ಉಮೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Tags:
error: Content is protected !!