ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದಲಿತ ಸಂಘರ್ಷ ಸಮಿತಿಯು ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಮಂಜುನಾಥ್ ಅಣ್ಣಯ್ಯ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಿರುವ ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾಯಿಸಿ ಹಿಂದೂ ಧರ್ಮದ ಹೆಸರಿನಲ್ಲಿ, ಧರ್ಮ ಸಂಸತ್ ಸ್ಥಾಪಿಸಿ ಅದರ ಮೇಲೆ ಹಿಡಿತ ಸಾಧಿಸುವುದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಗುರಿಯಾಗಿದೆ.
ಹೀಗಾಗಿ ಸುಮಾರು ೪೦೦ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂದು ಅಪಾರ ಅಕ್ರಮ ಹಣವನ್ನು ಸಂಗ್ರಹಿಸಿಕೊಂಡಿದ್ದಾರೆ. ಮಾಧ್ಯಮಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯತ್ನಿಸುವುದರೊಡನೆ ಇಡಿ, ಐಟಿ, ಸಿಬಿಐ ದಾಳಿಗಳ ಮೂಲಕ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದ ದುಡಿಯುವ ಜನರು, ದಮನಿತ ಸಮುದಾಯಗಳು, ಅಲ್ಪಸಂಖ್ಯಾತರು, ಪ್ರಜ್ಞಾವಂತರು ಒಂದಾಗುವ ಮೂಲಕ ಷಡ್ಯಂತ್ರ ವಿಫಲಗೊಳಿಸಲು ಶ್ರಮಿಸುತ್ತಿದ್ದಾರೆ.
ಹೀಗಾಗಿ ಕಾಂಗ್ರೆಸ್ ವಿರುದ್ಧದ ನಿಸ್ತೇಜ ಮಾತುಗಳನ್ನು ತಿರಸ್ಕರಿಸುವ ಮೂಲಕ ಅದಕ್ಕೆ ಬೆಂಬಲ ನೀಡಬೇಕು. ಈ ಮೂಲಕ ಸಂವಿಧಾನ ರಕ್ಷಣೆಗೆ ಮುಂದಾಗಬೇಕು. ಇನ್ನು, ರಾಜ್ಯದಲ್ಲಿ ದಲಿತ ಸಿಎಂ ವಿಷಯ ಈ ಸಂದರ್ಭದಲ್ಲಿ ಪ್ರಸ್ತುತವಲ್ಲ ಎಂದರು.
ಪದಾಧಿಕಾರಿಗಳಾದ ವಸಂತ್, ಪ್ರಶಾಂತ್, ರವಿ, ವಿನೋದ್ ಚಾಕೋ, ಉಮೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…