Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಮೈತ್ರಿಯಿಂದ ಬೇಸತ್ತು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಡಿಎಸ್‌ ಮುಖಂಡ

ಮೈಸೂರು: ಜೆಡಿಎಸ್‌ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್‌ಗ ಬೇಷರತ್‌ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ಉತ್ತಮ್‌ ಗೌಡ ರಾಂಪುರ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಎಲ್ಲಾ ವರ್ಗಗಳ ಮತದಾರರ ಬೆಂಬಲದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ‌ಗೆಲ್ಲಲಿದ್ದಾರೆ ಎಂದರು.

ಕಳೆದ ಬಾರಿ ಚುನಾವಣೆಯಂತೆ ಈ‌ ಬಾರಿಯ ಚುನಾವಣೆಯಲ್ಲೂ ಜೆಡಿಎಸ್ ತನ್ನ ಸ್ವಯಂಕೃತ ತಪ್ಪುಗಳಿಂದಲೇ ಪರಾಭವಗೊಳ್ಳಲಿದೆ ಎಂದು ಹೇಳಿದ್ದಾರೆ.

ಶ್ರೀರಂಗಪಟ್ಟಣ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ಸಹ‌ ಕಾಂಗ್ರೆಸ್ ಬೆಂಬಲಿಸಲು ಮನವಿ ಮಾಡಿದ್ದಾರೆ. ಈ‌ ಬಾರಿ ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

Tags:
error: Content is protected !!