ಮೈಸೂರು

ಮುಖ್ಯಮಂತ್ರಿಯನ್ನು ಬಂಧಿಸಲು ಷಡ್ಯಂತರ: ಡಾ.ಅಸ್ಕರ್ ಅಲಿ ಆರೋಪ

ಮೈಸೂರು: ದೆಹಲಿ, ಜಾರ್ಖಂಡ್ ರಾಜ್ಯಗಳಲ್ಲಿ ಅಲ್ಲಿನ ಮುಖ್ಯಮಂತ್ರಿಗಳನ್ನು ಬಂಧಿಸಿ ನಡೆಸಿದ ರಾಜಕೀಯ ಷಡ್ಯಂತರವನ್ನು ಬಿಜೆಪಿ ಈಗ ಕರ್ನಾಟಕದಲ್ಲಿ ಜೆಡಿಎಸ್ ಅನ್ನು ಮುಂದಿಟ್ಟುಕೊಂಡು ನಡೆಸಲು ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಅಸ್ಕರ್ ಅಲಿ ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ರಾಜಕೀಯ ಅರಾಜಕತೆಯನ್ನು ಸೃಷ್ಟಿಸಿ, ಸರ್ಕಾರದಲ್ಲಿ ಗೊಂದಲ ಮತ್ತು ಅಸ್ಥಿರತೆಯನ್ನು ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಗಲು 2 ಸಾವಿರ ಕೋಟಿ ರೂ ಲಂಚದ ಅಗತ್ಯವಿದೆ ಎನ್ನುವ ಪ್ರಕರಣ ಬೆಳಕಿಗೆ ಬಂದಾಗ ವಿವೇಚನೆ ಬಳಸಿ ನೋಟಿಸ್ ನೀಡದ ಇದೇ ರಾಜ್ಯಪಾಲರು, ಇದೀಗ ಅಹಿಂದ ವರ್ಗಗಳ ದೊಡ್ಡ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೋಟಿಸ್ ಕೊಟ್ಟಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ರಾಜ್ಯಪಾಲರ ಕಚೇರಿಗೆ ಈಗಾಗಲೇ ಬಂದಿರುವ ನೂರಾರು ದೂರುಗಳ ಮೇಲೆ ವರ್ಷಗಟ್ಟಲೇ ಯಾವುದೇ ಕ್ರಮವನ್ನು ತೆಗೆದುಕೊಳ್ಳದ ಇವರು, ಮುಖ್ಯಮಂತ್ರಿಗಳ ಮೇಲೆ ದೂರು ಬಂದ ಅರ್ಧ ಗಂಟೆಯಲ್ಲಿ ನೋಟಿಸ್ ನೀಡುವ ಅವಸರವನ್ನು ಪ್ರದರ್ಶಿಸಿದ್ದಾರೆ.

ಪ್ರಜಾಸತ್ತಾತ್ಮಕ ರೀತಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಾಗದ ಬಿಜೆಪಿ, ರಾಜ್ಯಪಾಲರ ಮೂಲಕ ಈ ರೀತಿ ಅಡ್ಡದಾರಿ ಹಿಡಿದಿದೆ. ರಾಜ್ಯಪಾಲರ ಈ ಅಸಂವಿಧಾನಿಕ ನಡೆ ಅಹಿಂದ ವರ್ಗಗಳಿಗೆ ಮಾಡಿರುವ ದೊಡ್ಡ ಅವಮಾನ. ರಾಜ್ಯಪಾಲರು ಈ ಕೂಡಲೇ ಮುಖ್ಯಮಂತ್ರಿಗಳಿಗೆ ನೀಡಿರುವ ನೋಟೀಸ್ ಅನ್ನು ಹಿಂಪಡೆಯಬೇಕು. ಬಿಜೆಪಿ-ಜೆಡಿಎಸ್‌ನ ಈ ರಾಜಕೀಯ ಷಡ್ಯಂತರದ ವಿರುದ್ಧ ಅಹಿಂದ ಜನರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

4 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

7 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

8 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

8 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

8 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

9 hours ago