ಮೈಸೂರು : ಸಂವಿಧಾನ ಬದಲಾವಣೆ ಬಿಜೆಪಿ ಪಕ್ಷದ ಹಿಡನ್ ಅಜೆಂಡ ಅದನ್ನು ಬೇರೆಯವರ ಕೈನಲ್ಲಿ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದ ಮಹಾರಾಜ ಮೈದಾನದಲ್ಲಿ ನಡೆಯುತ್ತಿರುವ ಐದು ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗದವರಿಗೂ ಸಾಮನತೆ, ಸಮಾನ ಹಕ್ಕು ನೀಡುವ ಕಾರಣಕ್ಕಾಗೊಯೇ ಬಿಜೆಪಿ ಅವರು ಸಂವಿಧಾನವನ್ನು ಬದಲಾವಣೆ ಮಾಡುವ ಅಚಲ ನಂಬಿಕೆ ಹೊಂದಿದ್ದಾರೆ ಎಂದರು.
ಬಿಜೆಪಿ ಪಕ್ಷದ ಸಂಸದ ಅನಂತ್‌ಕುಮಾರ್ ಹೆಗಡೆ ಈ ಹಿಂದೆಯೂ ಒಮ್ಮ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ್ದರು. ಬಳಿಕ ಮತ್ತೆ ಕೆಲವು ದಿನಗಳ ಹಿಂದೆ ಅದೇ ಹೇಳಿಕೆಯನ್ನು ನೀಡಿದ್ದಾರೆ. ಬಿಜೆಪಿ ಪಕ್ಷ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು.
ನಮಗೆ ೪೦೦ ಸ್ಥಾನ ನೀಡಿ ನಾವು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಅನಂತ್‌ಕುಮಾರ್ ಹೇಳಿಕೆ ನೀಡಿದರೂ ಅವರನ್ನು ಪಕ್ಷದಿಂದ ಉಚ್ಚಾಟನೆ ಅಥವ ಅಮಾನತ್ತು ಮಾಡಿಲ್ಲ. ನೇರವಾಗಿ ಹೇಳಲಾಗದೇ ಅವರಿವರ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ನಡ್ಡ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ನಾವೆಲ್ಲರೂ ಸೇರಿ ನಮ್ಮ ಸಂವಿಧಾನವನ್ನ ಉಳಿಸಿಕೊಳ್ಳಬೇಕು ಎಂದು ಸಮಾವೇಶದಲ್ಲಿ ಸೇರಿದ್ದ ಜನರಿಗೆ ಕರೆ ಕೊಟ್ಟರು.





