ಮೈಸೂರು

ಇಂದಿನ ಸ್ವತಂತ್ರ್ಯ ಜೀವನಕ್ಕೆ ಸಂವಿಧಾನ ಕಾರಣ : ಶಾಸಕ ಹರೀಶ್‌ ಗೌಡ

ಮೈಸೂರು : ಪ್ರತಿಯೊಬ್ಬರೂ ಸ್ವತಂತ್ರವಾಗಿ ಜೀವಿಸುತ್ತಿರುವುದಕ್ಕೆ ನಮ್ಮ ಸಂವಿಧಾನ ಕಾರಣ. ಅಂತಹ ಮಹಾನ್‌ ಗ್ರಂಥ ಸಂವಿಧಾನವನ್ನು ಕೊಟ್ಟವರು ಡಾ. ಬಿ. ಆರ್ ಅಂಬೇಡ್ಕರ್ ಅವರು ಎಂದು ಚಾಮರಾಜ ವಿಧಾನ ಸಭೆಯ ಶಾಸಕರಾದ ಕೆ. ಹರೀಶ್ ಗೌಡ  ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ (ಏ.14) ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾನ್ ಮಾನವತಾವಾದಿ, ವಿಶ್ವಜ್ಞಾನಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್‌ ಅವರು ಸಂವಿಧಾನ ಒಂದೇ ಅಲ್ಲದೇ ಅರ್ಥಶಾಸ್ತ್ರದಲ್ಲೂ ಪ್ರಸಿದ್ಧವಾದ ಮಹಾನ್ ವ್ಯಕ್ತಿ ಯಾಗಿದ್ದರು. ಜೊತೆಗೆ ಎಲ್ಲಾ ವಿಚಾರದಲ್ಲಿಯೂ ಪರಿಣಿತಿ ಹೊಂದಿದ್ದರು. ಅಂತಹ ಮಹಾನ್ ವ್ಯಕ್ತಿ ನಮ್ಮ ದೇಶಕ್ಕೆ ಸಂವಿಧಾನವನ್ನು ರಚಿಸಿರುವುದು ನಮ್ಮೆಲ್ಲರ ಹೆಮ್ಮೆ ಎಂದರು.

ದಿನ ದಲಿತರು, ಹಿಂದುಳಿದವರು ಹಾಗೂ ಅಸ್ಪೃಶ್ಯರಿಗೆ ದೇಶದಲ್ಲಿ ಸಮಾನತೆ, ಸಹಬಾಳ್ವೆಯಿಂದ ಬದುಕಲು ಸಂವಿಧಾನವನ್ನು ಕೊಟ್ಟಿದ್ದಾರೆ ಅದನ್ನು ಯಾರೂ ಸಹ ಸರಿಯಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ವಿಧಾನಸಭೆ ಶಾಸಕ ಜಿ. ಟಿ. ದೇವೇಗೌಡ ಮಾತನಾಡಿ, ಸಂವಿಧಾನದ ಮೂಲಕ ಎಲ್ಲರ ಕಣ್ಣನ್ನು ತೆರೆಸಿದವರು ಡಾ. ಬಿ. ಆರ್ ಅಂಬೇಡ್ಕರ್. ಎಲ್ಲರಿಗೂ ಇರುವುದು ಒಂದೇ ಸಂವಿಧಾನ ಅದು ಬಾಬ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವಂತಹ ಸಂವಿಧಾನ ಅದರಂತೆ ನಾವು ಅಡಳಿತ ನಡೆಸಬೇಕು ಎಂದು ತಿಳಿಸಿದರು.

18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಒಂದು ಮತ ಎಂಬುದನ್ನು ನಮಗೆ ಕೊಟ್ಟಿದಾರೆ. ಅತ್ಯುತ್ತಮ ಸದಸ್ಯರನ್ನು ಆಯ್ಕೆ ಮಾಡುವಂತಹ ಹಕ್ಕನ್ನು ನಮಗೆ ನೀಡಿದವರು ಡಾ. ಬಿ.ಆರ್ ಅಂಬೇಡ್ಕರ್ ಅವರು ಎಂದು ತಿಳಿಸಿದರು.

ಡಾ. ಬಾಬ ಸಾಹೇಬ್ ಅಂಬೇಡ್ಕರ್ ಒಬ್ಬ ವ್ಯಕ್ತಿಯಲ್ಲ ಅವರು ಒಂದು ದೊಡ್ದ ಶಕ್ತಿ. ಶಿಕ್ಷಣ ಸಂಘಟನೆ ಅನ್ಯಾಯದ ವಿರುದ್ಧ ಹೋರಾಟ ಎಂಬ ಕರೆಯನ್ನು ನೀಡಿದ್ದಾರೆ. ಶಿಕ್ಷಣಕ್ಕೆ ಮೊದಲ ಅಧ್ಯತೆಯನ್ನು ನೀಡಿ ಕ್ರಾಂತಿಯನ್ನು ಮಾಡಿದವರು ಅಂಬೇಡ್ಕರ್ ಅವರು ಎಂದು ಹೇಳಿದರು.

ಭರತ ಖಂಡಕ್ಕೆ ಸಮಾನತೆಯನ್ನು ನೀಡಿದ್ದಾರೆ. ಬುದ್ಧ ಬಸವಣ್ಣ, ಗಾಂಧೀಜಿ ಇವರೆಲ್ಲರಿಗಿಂತ ಮೀರಿದ ಸಮಾನತೆ, ಸಾಮಾಜಿಕತೆ, ಆರ್ಥಿಕತೆಯನ್ನು ನೀಡಿದವರು ಡಾ. ಬಿ. ಆರ್ ಅಂಬೇಡ್ಕರ್ ಎಂದರು.

ಸಾಮಾಜಿಕ ನ್ಯಾಯದ ತೆರನ್ನು ಏಕಾಂಗಿಯಾಗಿ ಇಷ್ಟು ದೂರ ತಂದಿದ್ದೇನೆ ನಿಮ್ಮಲ್ಲಿ ನಂಬಿಕೆ ಇದ್ದರೆ ಮುಂದಕ್ಕೆ ಎಳೆಯಿರಿ ಇಲ್ಲದೆ ಹೋದರೆ ಹಿಂದಕ್ಕೆ ತಳ್ಳುವಂತಹ ಕೆಲಸ ಮಾಡಬೇಡಿ ಎಂಬ ಮಾತನ್ನು ನಮಗೆ ಹೇಳಿದ್ದಾರೆ ಅದನ್ನು ನಾವು ಅರಿಯಬೇಕು ಎಂದರು.

ವಿಧಾನ ಪರಿಷತ್ ನ ಶಾಸಕ ಡಾ ಡಿ. ತಿಮ್ಮಯ್ಯ ಮಾತನಾಡಿ. ಕತ್ತೆಲೆಯಲ್ಲಿ ಬದುಕುತ್ತಿದ್ದಂತಹ ಜನರಿಗೆ ಬೆಳಕು ನೀಡಿ, ಚೇತನದ  ಶಕ್ತಿಯನ್ನು ನೀಡಿದವರು ಡಾ. ಬಿ.ಆರ್ ಅಂಬೇಡ್ಕರ್ ರವರು ಎಂದು ಹೇಳಿದರು

ಇಡೀ ಸಮಗ್ರ ಜನತೆಗೆ ಅವರು ಕೊಟ್ಟಿರುವಂತಹ ಸಂವಿಧಾನ ಮಾರ್ಗದರ್ಶನ ನಮಗೆ ದಾರಿ ದೀಪವಾಗಿದೆ ಅದನ್ನು ನಾವು ಅನುಸರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಸಿ.ಎನ್.ಮಂಜೇಗೌಡ, ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ  ಎನ್.ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಶಿಫ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

48 mins ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

3 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

3 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

3 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

3 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

3 hours ago