ಮೈಸೂರು

ಸಿದ್ದರಾಮಯ್ಯ ಪುತ್ರನಿಗೆ ಸಾಂವಿಧಾನಿಕ ಹುದ್ದೆ : ಆಶ್ರಯ ಸಮಿತಿ ಅಧ್ಯಕ್ಷರಾಗಿ ಯತೀಂದ್ರ ನೇಮಕ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ. ಹದಿನೈದು ದಿನಗಳ ಹಿಂದೆಯೇ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆದ್ರೆ, ಅದು ಇಂದುಬೆಳಕಿಗೆ ಬಂದಿದೆ. ಸ್ವತಃ ಯತೀಂದ್ರ ಅವರೇ ತಮಗೆ ಸಾಂವಿಧಾನಿಕ ಹುದ್ದೆ ನೀಡಿರುವ ಬಗ್ಗೆ ಮಾಧ್ಯಮಗಳಿಗೆ ಬಹಿರಂಗಪಡಿಸಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 15 ದಿನಗಳ ಹಿಂದೆಯೇ ಆದೇಶವಾಗಿದ್ದು, ವರುಣಾ ವಿಧಾನಸಭಾ ಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸುತ್ತೇನೆ. ಕಳೆದ 15 ದಿನದ ಹಿಂದೆಯೇ ಆದೇಶ ಆಗಿದೆ. ಆದೇಶ ಪತ್ರವನ್ನ ನಿಮಗೆ ಕಳುಹಿಸಿಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸರಕಾರಿ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಭಾಗಿಯಾಗುವುದರೊಂದಿಗೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿದ್ದವು. ಬಳಿಕ ಬಹಿರಂಗವಾಗಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವುದನ್ನು ಬಿಟ್ಟ ಡಾ.ಯತೀಂದ್ರ ಅವರು ಸಿಎಂ ನಿವಾಸದಲ್ಲೇ ಅಧಿಕಾರಿಗಳ ಸಭೆ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಸಾಮಾಜಿಕ ಜಾಲತಾಣಗಳ ಮೂಲಕ ಟೀಕಿಸಿದ್ದವು. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಸಮಿತಿ ಸದಸ್ಯರನ್ನಾಗಿ ಅವರನ್ನು ನೇಮಕ ಮಾಡಲು ಚಿಂತನೆ ನಡೆಸಿದ್ದರು. ಆದರೆ, ಇದೀಗ ಸದ್ದಿಲ್ಲದೇ ಯತೀಂದ್ರ ಅವರನ್ನ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ 15 ದಿನಗಳ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಸ್ವತಃ ಯತೀಂದ್ರ ಅವರೇ ಹೇಳಿದ ಬಳಿಕ ಮಹಿತಿ ಹೊರಬಿದ್ದಿದ್ದು, ಚರ್ಚೆಗೆ ಗ್ರಾಸವಾಗಿದೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago