ಮೈಸೂರು

ನಂಜನಗೂಡು | ಕಂಟೇನರ್ ಡಿಕ್ಕಿ; ಕಾರು ಚಾಲಕ ಸಾವು

ನಂಜನಗೂಡು: ಕಂಟೇನರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು- ಗುಂಡ್ಲುಪೇಟೆಯ ರಾಷ್ಟ್ರೀಯ ಹೆದ್ದಾರಿ ೭೬೬ರ ಸಿಂಧುವಳ್ಳಿಪುರದಲ್ಲಿ ನಡೆದಿದೆ.

ಕಾರಿನ ಚಾಲಕ ಅಸ್ಸಾಂ ಮೂಲದ ದಿನೇಶ ಸ್ಥಳದಲ್ಲೇ ಮೃತಪಟ್ಟವರು. ಕಾರಿನಲ್ಲಿದ್ದ ಮಂಡ್ಯ ನಗರಸಭೆ ಸದಸ್ಯ ಶಿವಪ್ರಕಾಶ್ ಅವರ ಪುತ್ರ ಚೆನ್ನೈನ ಐಆರ್‌ಎಸ್ ಕಂಪೆನಿಯ ಉದ್ಯೋಗಿ ತೇಜಸ್ ಕುಮಾರ್, ಈತನ ಸಹೋದರ ಕುಶಾಲ್, ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಡ್ಯದ ಈ ಕಾರು ಗುಂಡ್ಲುಪೇಟೆಯತ್ತ ತೆರಳುತ್ತಿದ್ದಾಗ ಸಿಂಧುವಳ್ಳಿಪುರದಲ್ಲಿ ಎದುರಿನಿಂದ ಅತಿ ವೇಗವಾಗಿ ಬಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ನಂಜನಗೂಡು ಸಂಚಾರ ಠಾಣೆಯ ಅಧಿಕಾರಿಗಳಾದ ಸಿದ್ದರಾಜು ಹಾಗೂ ಮಾದೇಶ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಿದ್ದಾರೆ.ಕಂಟೇನರ್ ಚಾಲಕ ಪರಾರಿಯಾಗಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಠಾಣೆ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

37 mins ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

43 mins ago

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…

48 mins ago

ಓದುಗರ ಪತ್ರ: ಸೇಡು.. ಕೇಡು !

ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…

51 mins ago

ಓದುಗರ ಪತ್ರ: ನಿರುದ್ಯೋಗ ಸಮಸ್ಯೆ ನಿವಾರಿಸಿ

ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…

54 mins ago

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

4 hours ago