ಮೈಸೂರು

ಕಲುಷಿತ ನೀರು ಸೇವಿಸಿ ಸಾವು ಪ್ರಕರಣ: ಡಿಎಚ್‌ಒ ಬಳಿ ಮಾಹಿತಿ ಕೇಳಿದ ಸಿಎಂ

ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕರೆ ಮೂಲಕ ಮಾಹಿತಿ ಬನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ ಹಾಗೂ ಕೆ.ಆರ್‌ ಆಸ್ಪತ್ರೆಯಲ್ಲಿ ತಲಾ 25 ಬಡ್‌ಗಳನ್ನು ಕಾಯ್ದಿರಿಸಲಾಗಿದೆ. ವಾಂತಿ-ಬೇಧಿ ಕಾಣಿಸಿಕೊಂಡವರಲ್ಲಿ ಕಾಲರಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…

9 hours ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…

9 hours ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…

9 hours ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…

10 hours ago

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

10 hours ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

10 hours ago