ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ ಹುಲಿ ದಾಳಿಗೆ ಒಂದು ಎತ್ತು ಬಲಿಯಾಗಿದೆ.

ಗುರುಪುರ ಗ್ರಾಮದ ಹಳೇವಾರಂಚಿಯ ಮುನ್ನಾ ಎಂಬುವರಿಗೆ ಸೇರಿದ ಎತ್ತನ್ನು, ಕೆರೆ ಸಮೀಪ ಜಾನುವಾರುಗಳನ್ನು ಮೇಯಲು ಕಟ್ಟಿ ಹಾಕಿದ್ದ ವೇಳೆ ಹುಲಿ ದಾಳಿ ಮಾಡಿ ಕೊಂದಿದೆ. ಒಂದೇ ತಾಲ್ಲೂಕಿನಲ್ಲಿ ನಿರಂತರವಾಗಿ ಹುಲಿ ದಾಳಿ ನಡೆಯುತ್ತಿರುವುದರಿಂದ ಗ್ರಾಮಸ್ಥರು ತೀವ್ರ ಭಯದಲ್ಲಿದ್ದಾರೆ.

ಇದೇ ಹುಣಸೂರು ತಾಲ್ಲೂಕಿನಲ್ಲಿ ಎರಡು ಕಡೆ ಹುಲಿ ದಾಳಿ ಸಂಭವಿಸಿದ್ದು, ಹಸು ಹಾಗೂ ಎತ್ತು ಬಲಿಯಾಗಿವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.

ಹುಲಿ ದಾಳಿಯಲ್ಲಿ ಮೃತಪಟ್ಟ ಎತ್ತಿನ ಶವವನ್ನು ಟ್ರ್ಯಾಕ್ಟರ್‌ನಲ್ಲಿ ತಂದು ಗ್ರಾಮಸ್ಥರು ಗುರುಪುರದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಎಚ್.ಡಿ.ಕೋಟೆ–ಹುಣಸೂರು ಮುಖ್ಯರಸ್ತೆಯನ್ನು ತಡೆದು ಕೆಲಕಾಲ ರಸ್ತೆ ತಡೆ ನಡೆಸಿದರು.

ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ ಗ್ರಾಮಸ್ಥರು, ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕು. ಗ್ರಾಮಗಳ ಸುತ್ತಲೂ ಪಹರೆ ಹೆಚ್ಚಿಸಬೇಕು ಹಾಗೂ ಜಾನುವಾರು ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಸುರಕ್ಷತೆ ಬಗ್ಗೆ ಗಂಭೀರ ಆತಂಕ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

41 mins ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

1 hour ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

1 hour ago

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…

2 hours ago

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…

2 hours ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

3 hours ago