ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೭,೮ ಮತ್ತು ೯ನೇ ವಾರ್ಷಿಕ ಘಟಿಕೋತ್ಸವವನ್ನು ಜ.೧೮ರಂದು ಆಯೋಜಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ, ಈ ಬಾರಿ ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ, ಸಂಗೀತ ನಿರ್ದೇಶಕ ಸಾಧು ಕೋಕಿಲ ಸೇರಿದಂತೆ ೯ ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ. ಮೂರು ವರ್ಷಗಳ ಅವಧಿಯ ಘಟಿಕೋತ್ಸವವು ಒಂದೇ ಬಾರಿಗೆ ನಡೆಯುತ್ತಿದ್ದು, ಕರ್ನಾಟಕ ವಿವಿ ಕಾಯ್ದೆ ಪ್ರಕಾರ ತಲಾ ಮೂವರಂತೆ ಒಂಬತ್ತು ಮಂದಿಗೆ ಗೌರವ ಡಾಕ್ಟರೇಟ್, ೫೪೦ ಅಭ್ಯರ್ಥಿಗಳಿಗೆ ಸ್ನಾತಕ-ಸ್ನಾತಕೋತ್ತರ ಪದವಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಶನಿವಾರ ಮಧ್ಯಾಹ್ನ ೩ ಗಂಟೆಗೆ ನಡೆಯಲಿರುವ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕೇಂದ್ರೀಯ ಸಂಸ್ಕೃತ ವಿವಿ ಕುಲಪತಿ ಪ್ರೊ.ಶ್ರೀನಿವಾಸ ವರಖೇಡಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕುಲಸಚಿವರಾದ ಕೆ.ಎಸ್.ರೇಖಾ, ಪರೀಕ್ಷಾಂಗ ಕುಲಸಚಿವ ಪ್ರೊ.ಎಂ.ಬಿ.ಮಂಜುನಾಥ್ ಹಾಗೂ ಪ್ರಶಾಸನ ಮಂಡಳಿ ಹಾಗೂ ಪ್ರಶಿಕ್ಷಣ ಪರಿಷತ್ತಿನ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ…
ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು…
ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್…
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ.…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ,…
ಮಂಡ್ಯ: ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ವಲಯವಾಗಿಸಿ ದೃಢೀಕರಣ ಪತ್ರ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ…