ನಂಜನಗೂಡು:ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾರ್ಯಕ್ರಮ ಉದ್ದೇಶಿಸಿ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧ್ರುವ ನಾರಾಯಣ್ ಮಾತಾನಾಡಿ
ಸ್ವತಂತ್ರ ಪೂರ್ವ ನಂತರ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಬಿಜೆಪಿ ಪಕ್ಷದ ವೈಫಲ್ಯಗಳನ್ನು ತಿಳಿಸುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಲವು ದಿನಗಳ ಹಿಂದೆ ಪಾದಯಾತ್ರೆ ನಡೆದಿತ್ತು. ಈ ಸಮಯದಲ್ಲಿ ಕೆಲವು ಪಂಚಾಯತಿಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಒತ್ತಾಯದ ಮೇರೆಗೆ ಇಂದಿನಿಂದ ಉಳಿದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರ ಜೊತೆ ಸಭೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಫಲ್ಯಗಳ ಬಗ್ಗೆ ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ಕಾಂಗ್ರೆಸ್ ಪಕ್ಷದ ಕೊಡುಗೆ ಏನು ಕಾರ್ಯಕರ್ತರು ಮುಖಂಡರ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಗುಡುಗಿದರು.
ಇಂದಿನಿಂದಲೇ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಮಾಜಿ ಮತ್ತು ಹಾಲಿ ಗ್ರಾಮ ಪಂಚಾಯತಿ ಸದಸ್ಯರು ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯತಿ ಪಕ್ಷದ ಮುಖಂಡರು ಬ್ಲಾಕ್ ಅಧ್ಯಕ್ಷರುಗಳು ಪ್ರತಿಯೊಂದೂ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಮತ್ತು ಸ್ವತಂತ್ರ ಪೂರ್ವ ಮತ್ತು ನಂತರ ದೇಶದ ಅಭಿವೃದ್ಧಿಗೆ ಬೆಳವಣಿಗೆಗೆ ಮತ್ತು ಸ್ವತಂತ್ರ ತರಲು ದೇಶ ಕಟ್ಟಲು ಕಾಂಗ್ರೆಸ್ ಪಕ್ಷದ ಕೊಡುಗೆಗಳ ಬಗ್ಗೆ ತಿಳಿಸಿ ಬ್ರಿಟಿಷರು ಇನ್ನೂರು ವರ್ಷ ಕಾಲ ದೇಶವನ್ನು ದೋಚಿ ಕೊಂಡಿದ್ದ ಇಂಥ ಸಮಯದಲ್ಲಿ ದೇಶ ಬಡತನದಿಂದ ಹಿಂದುಳಿದಿತ್ತು, ಬರಗಾಲ ಸೃಷ್ಟಿಯಾಗಿತ್ತು, ಇಂಥ ಸಮಯದಲ್ಲಿ ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿದ ಕೊಡುಗೆಗಳು ಬಗ್ಗೆ ಪ್ರಚಾರ ಮಾಡಿ ಮುಂದೆ ಬರುವಂತ ಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿ ಎಂದರು.
ಮುಂದೆ ಬರುವಂತಹ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಿ ಉತ್ತಮ ಸರ್ಕಾರ ಬರಲು ಮತ್ತು ಬಡವರು ಕೃಷಿಕರು ನೆಮ್ಮದಿಯಿಂದ ಬದುಕಬೇಕಾದರೆ ಯಾರ ಮಾತಿಗೂ ಕಿವಿ ಕೊಡದೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದರು.
ಐದು ವರ್ಷ ಕಾಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರ ನಡೆಸಿ ಕೊಟ್ಟ ಮಾತಿನಂತೆ ಹಲವಾರು ಯೋಜನೆಗಳನ್ನು ಮತ್ತು ಕ್ಷೀರ ಭಾಗ್ಯ ಅನ್ನಭಾಗ್ಯ ಶಾಲೆ ಮಕ್ಕಳಿಗೆ ಬೈಸಿಕಲ್ ಶೋ ಮತ್ತು ಮಕ್ಕಳಿಗೆ ವಸ್ತ್ರಗಳನ್ನು ಎಲ್ಲಾ ಸಮುದಾಯದವರಿಗೆ ಭವನ ನಿರ್ಮಿಸಲು ಅನುದಾನ ನೀಡಿದ್ದಾರೆ. ಪ್ರತಿ ಕಾರ್ಡಿಗೂ ಎಂಟು ಕೆಜಿ ಅಕ್ಕಿ ಮತ್ತು ರಾಗಿ ನೀಡಿದರು ಒಟ್ಟಾರೆ ಐದು ವರ್ಷಗಳ ಕಾಲ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಬಡವರು ಮತ್ತು ರೈತರ ಪರ ಸರ್ಕಾರವಾಗಿತ್ತು.ನಂಜನಗೂಡಿನ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ಕಚೇರಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದೆ. ಈ ಮಾತು ನನ್ನದಲ್ಲ ಕ್ಷೇತ್ರದ ಜನಗಳು ಹೇಳುತ್ತಿರುವ ಮಾತು ಎಂದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…