ಬೆಂಗಳೂರು: ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರವಾಗಿ ಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ.
ಸರ್ಕಾರವು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮೈಸೂರಿನ ರಾಜಮನತನದ ಪ್ರಮೋದಾ ದೇವಿ ಒಡೆಯರ್ ಅವರು ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಇದನ್ನು ಮಾನ್ಯ ಮಾಡಿರುವ ಹೈಕೋರ್ಟ್‍ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರು, ಮುಂದಿನ ಆದೇಶದವರೆಗೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ತಡೆಯಾಜ್ಞೆ ನೀಡಿದೆ.
ಕಳೆದ ಅಧಿವೇಶನದ ವೇಳೆ ವಿಧಾನಮಂಡಲದ ಉಭಯ ಸದನಗಳಲ್ಲಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆಯನ್ನು ಮಂಡಿಸಿ ಅಂಗೀಕರಿಸಲಾಗಿತ್ತು. ಆದರೆ ಈ ಕಾಯ್ದೆಯಲ್ಲಿ ಕೆಲವು ನಿಯಮಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿ ರಾಜಮನೆತನವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಅರ್ಜಿದಾರರು ದೂರಿದ್ದು, ಅರ್ಜಿದಾರರ ಪರವಾಗಿ ವಕೀಲರಾದ ಮಾನಸಿ ಕುಮಾರ್ ಅವರು ವಾದ ಮಂಡಿಸಿದ್ದರು.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಹೊಸ ಕಾಯ್ದೆಯ ಮೂಲಕ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ದೇವಸ್ಥಾನ ಕಟ್ಟಿ ತಲೆ ತಲಾಂತರಗಳಿಂದ ಪೂಜಿಸಿಕೊಂಡು ಬಂದ ಒಡೆಯರ ರಾಜಮನೆತನಕ್ಕೆ ಅನ್ಯಾಯ ಮಾಡಲಾಗಿದೆ. ಈ ಮೂಲಕ ಚಾಮುಂಡೇಶ್ವರಿ ದೇವಾಲಯಕ್ಕೂ ಹಾಗೂ ರಾಜಮನೆತನಕ್ಕೂ ಇರುವ ಸಂಬಂಧ ಕಡಿತಗೊಳಿಸಿ ಎಲ್ಲ ಆಸ್ತಿ, ಪೂಜೆ, ವಿಧಿ ವಿಧಾನ, ಕಾಯ್ದೆ ರಚನೆ ಎಲ್ಲವೂ ಪ್ರಾಧಿಕಾರದ ಪಾಲಾಗಲಿದೆ ಎಂದು ಅರ್ಜಿದಾರರು ಹೈಕೋರ್ಟ್ ಮೂಲಕ ಪ್ರಶ್ನಿಸಿದ್ದರು.
ಸುದೀರ್ಘ ವಾದ ಮಂಡಿಸಿದ ಅರ್ಜಿದಾರರ ಮನವಿ ಸ್ವೀಕರಿಸಿದ ನ್ಯಾಯಾಲಯ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ತಡೆಯಾಜ್ಞೆ ನೀಡಿದ್ದು, ಮುಂದಿನ ಅರ್ಜಿ ವಿಚಾರಣೆಯನ್ನು ಇದೇ ತಿಂಗಳ 22 ಕ್ಕೆ ಮುಂದೂಡಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…