ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಇಂದು(ಮಾ.13)ನಗರಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಸೌಜನ್ಯ ಕೊಲೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿರುವ ವಿಷಯಕ್ಕೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ ಅವರು, ಸೌಜನ್ಯ ಕೊಲೆ ಪ್ರಕರಣ ಕುರಿತು ನ್ಯಾಯಾಲಯದಿಂದಲೂ ತೀರ್ಪು ಬಂದಿದೆ. ನಾನು ಒಂದು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡಲಿಕ್ಕೆ ಆಗಲ್ಲ. ನಾನು ಮಾತ್ರ ಆ ಹೆಣ್ಣು ಮಗಳ ಪರವಾಗಿ ನಿಲ್ಲುತ್ತೇನೆ. ಆ ಪ್ರಕರಣದಲ್ಲಿ ಸಾವಿಗೀಡಾದ ಎಲ್ಲರಿಗೂ ನ್ಯಾಯ ಸಿಗಬೇಕು ಎನ್ನುವುದು ನನ್ನ ಆಶಯ. ಧರ್ಮಸ್ಥಳಕ್ಕೆ ಹೋದಾಗ ಸಂತ್ರಸ್ತ ಕುಟುಂಬದವರನ್ನು ಭೇಟಿ ಮಾಡುವುದಾಗಿ ಹೇಳಿದರು.
ಅಹವಾಲು ಸ್ವೀಕಾರ: ಕೇಂದ್ರ ಕಾರಾಗೃಹ ಆವರಣದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಚೌಧರಿ ಅವರು ಹಲವು ಮಹಿಳೆಯರಿಂದ ಮನವಿ ಸ್ವೀಕರಿಸಿದರು.
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…