ಮೈಸೂರು

ಹುಲಿ ದಾಳಿಗೆ ಹಸು ಗಾಯ ; ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ.

ಹುಲಿ ದಾಳಿಯಿಂದ ಹಸು ತೀವ್ರವಾಗಿ ಗಾಯಗೊಂಡಿದೆ. ಹುಲಿ ದಾಳಿಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗೋಪಾಲಯ್ಯ ನೇತೃತ್ವದಲ್ಲಿ ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣಾ ಪೋಲಿಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಪತ್ತೆಯಾಗಿಲ್ಲ.

ಆರ್‌ಎಫ್‌ಒ ನಂದಕುಮಾರ್ ಸ್ಥಳಕ್ಕೆ ಆಗಮಿಸಿ, ಗಾಯಗೊಂಡಿರುವ ಹಸುವಿನ ಚಿಕಿತ್ಸೆಗೆ ಪರಿಹಾರವನ್ನು ನೀಡಲಾಗುವುದು. ಹುಲಿ ಸೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

25 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago