ಮಲ್ಕುಂಡಿ : ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಸಮೀಪದ ಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲಕ್ಷ್ಮಮ್ಮ ಎಂಬವರು ಸೋಮವಾರ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಪೊದೆಯಲ್ಲಿದ್ದ ಹುಲಿ ದಾಳಿ ಮಾಡಿ ಹಸುವನ್ನು ಕೊಂದುಹಾಕಿದೆ.
ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರು ಕಿರುಚಾಡಿದಾಗ ಹುಲಿ ಗಾಬರಿಗೊಂಡು ಹಸುವನ್ನು ಅರೆಬರೆ ತಿಂದು ಬೀಸಾಡಿ ಹೋಗಿದೆ. ತಕ್ಷಣ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸದಿ, ಸ್ಥಳಕ್ಕೆ ಅರಣ್ಣ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹಾಡಹಗಲೇ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ತೆರಳಿ ಕೆಲಸ ಮಾಡಲು ಭಯಪಡುವಂತಾಗಿದೆ. ಈಗಾಗಲೇ ರೈತರು ಬೆಳೆದಿರುವ ಫಸಲುಗಳನ್ನು ಕಟಾವು ಮಾಡಲು
ಜಮೀನಿಗೆ ಹೋಗುತ್ತಿದ್ದು, ಅರಣ್ಯ ಅಧಿಕಾರಿಗಳು ತಕ್ಷಣ ಹುಲಿಯನ್ನು ಸೆರೆಹಿಡಿಯಬೇಕು. ನೊಂದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.





