ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ.
ಟಿಬೆಟ್ ಕ್ಯಾಂಪ್ ಬಿ.ವಿಲೇಜ್‌ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ ಬಲಿಯಾಗಿದ್ದು, ಮೇಯಲು ಬಿಟ್ಟಿದ್ದ ವೇಳೆ ಈ ಘಟನೆ ನಡೆದಿದೆ. ದಾಳಿ ವೇಳೆ ಟಿಬೆಟಿಯನ್ನರ ಕೂಗಾಟ ಕೇಳಿ ಹುಲಿ ಹಸುವಿನ ಮೃತದೇಹವನ್ನು ಬಿಟ್ಟು ಕಾಲ್ಕಿತ್ತಿದೆ. ಸ್ಥಳಕ್ಕೆ ವೀರನಹೊಸಳ್ಳಿ ವನ್ಯಜೀವಿ ವಲಯದ ಆರ್‌ಎಫ್‌ಒ ವಿನೋದ್‌ಗೌಡ, ಡಿಆರ್‌ಎಫ್‌ಒ ಸಹನಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದರು.
ವರ್ಷದ ಹಿಂದಷ್ಟೇ ಹುಣಸೇಕಟ್ಟೆ ಹಳ್ಳದ ಕುರುಚಲು ಕಾಡಿನಲ್ಲಿ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಆದಿವಾಸಿ ಯುವಕನನ್ನು ಕೊಂದಿದ್ದ ಸ್ಥಳದ ಹತ್ತಿರದ ಟಿಬೆಟ್ ಕ್ಯಾಂಪಿನಲ್ಲಿ ಮತ್ತೆ ಹುಲಿ ಕಾಣಿಸಿಕೊಂಡು, ಹಸುವನ್ನು ಕೊಂದುಹಾಕಿದೆ. ಇದೀಗ ಹೊಸೂರು ಕೊಡಗು ಕಾಲೋನಿ,ಗುರುಪುರ ಹಾಗೂ ನಾಗಾಪುರ ಪುನರ್ವಸತಿ ಕೇಂದ್ರದ ಜನರು ಹಾಗೂ ಟಿಬೆಟಿಯನ್ನರು ಮತ್ತೆ ಹುಲಿ ಕಾಣಿಸಿಕೊಂಡಿರುವುದರಿಂದ ಆತಂಕಗೊಂಡಿದ್ದು, ಹುಲಿ ಸೆರೆಗೆ ಒತ್ತಾಯಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…