ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್‌ರಿಗೆ ಸೇರಿದ ಹಸುವನ್ನು ಹೊಲದಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಕೆಲಭಾಗ ತಿಂದು ಹಾಕಿದೆ. ಬುಧವಾರ ಗುರುಪುರದ ಹುಣಸೆಕಟ್ಟೆ ಹಳ್ಳದಲ್ಲಿ ಗುರುವಾರ ಹೆಮಿಗೆಯಲ್ಲಿ ಹುಲಿದಾಳಿ, ಸದ್ಯಕ್ಕೆ ಹನಗೋಡು ಭಾಗದಲ್ಲಿ ಹುಲಿ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಲಯದ ಆರ್ ಎಫ್‌ಓ ಸುಬ್ರಹ್ಮಣ್ಯ, ಸಿಬ್ಬಂದಿ ಭೇಟಿ ಮಾಡಿ ಪರಿಶೀಲಿಸಿದ್ದಾರೆ.
ಇದನ್ನು ಓದಿ: ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್ ; ರೈತರ ಆಕ್ರೋಶ
ಹೆಮ್ಮಿಗೆ ಸುತ್ತಮುತ್ತ ಹುಲಿ ಓಡಾಡುತ್ತಿದ್ದು, ಅನೇಕರಿಗೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಲೇ ಇದ್ದರೂ ಹುಲಿ ಪತ್ತೆಯಾಗುತ್ತಿಲ್ಲ, ಇನ್ನಾದರೂ ವೈಜ್ಞಾನಿಕವಾಗಿ ಕಾರ್ಯಾಚರಣೆ ಕೈಗೊಂಡು ಹುಲಿ ಸೆರೆ ಹಿಡಿಯುವಂತೆ ಗ್ರಾಪಂ ಅಧ್ಯಕ್ಷ ಹೆಮ್ಮಿಗೆ ಪಾಪಣ್ಣ ಒತ್ತಾಯಿಸಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…