ಮೈಸೂರು

ಎಚ್.ಡಿ.ಕೋಟೆ | 20 ಅಡಿ ಆಳಕ್ಕೆ ಬಿದ್ದಿದ್ದ ಗರ್ಭಿಣಿ ಹಸುವಿನ ರಕ್ಷಣೆ

ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್‌ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು.

ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ ಗರ್ಭಿಣಿ ಹಸು ಹಳ್ಳಕ್ಕೆ ಬಿದ್ದಿತ್ತು. ಬಿದರಹಳ್ಳಿ ಗ್ರಾಮದ ಶಿವಲಿಂಗನಾಯಕ ಎಂಬುವವರ ಹಸು ಇದಾಗಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಕೇನ್‌ ತರಿಸಿಕೊಂಡು ಹಸುವನ್ನು ಮೇಲೆತ್ತಿದ್ದಾರೆ.

ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿದ ಸ್ಥಳೀಯರು ಹಸುವನ್ನು ಮೇಲಕ್ಕೆತ್ತಿ ಜೀವ ಉಳಿಸಿದ್ದಾರೆ. ಸದ್ಯ ಹಸು ಪ್ರಾಣಾಪಾಯದಿಂದ ಪಾರಾಗಿದ್ದು, ರೈತ ಶಿವಲಿಂಗನಾಯಕ ಕಾರ್ಯಾಚರಣೆ ನಡೆಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

9 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

10 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

11 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

11 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

11 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

12 hours ago