ಮೈಸೂರು

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಭೆಯಲ್ಲಿ ಹಾಜರಿದ್ದ ನಾಮನಿರ್ದೇಶಿತ ಸದಸ್ಯ ಎಸ್. ಸುರೇಶ್ ಕುಮಾರ್ ಜೈನ್ ಹಾಗೂ ಸುಬಾನ್ ಅವರು ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು .ಜಿಲ್ಲಾಧಿಕಾರಿಗಳು ಸಮಸ್ಯೆಗಳನ್ನು ಆಲಿಸಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಸಮುದಾಯದವರು ವಾಸಿಸುವ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ಅವರು ದಾಳಿ ನಡೆಸಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಪ್ರಕರಣ ದಾಖಲಿಸುವಂತೆ ತಿಳಿಸಿದರು.

ಇದನ್ನು ಓದಿ: ಈ ದಿನ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಇದರೊಂದಿಗೆ ಮಾದಕ ವಸ್ತುಗಳ ಮಾರಾಟ, ಸಂಚಾರಿ ನಿಯಮ ಪಾಲನೆ ಮಾಡದೆ ವಾಹನ ಚಾಲನೆ ಮಾಡುವುದು, ವೀಲಿಂಗ್ ಮಾಡಿ ವಾಹನ ಚಾಲನೆ ಮಾಡುವುದು ಕುರಿತಂತೆ ಪರಿಶೀಲನೆ ನಡೆಸುವಂತೆ ಪೊಲೀಸ್ ಅಯುಕ್ತರಿಗೆ ಪತ್ರ ಬರೆಯುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜೈನ್ ಸಮುದಾಯ ವಾಸಿಸುವ ಸ್ಥಳದಲ್ಲಿ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ವಿವಿಧ ಇಲಾಖೆಗಳಿಂದ ದೊರಕುವ ಸೌಲಭ್ಯಗಳ ಬಗ್ಗೆ ತಿಳಿಸಿ, ಸರ್ಕಾರದ ಯೋಜನೆ ಪಡೆದುಕೊಳ್ಳಲು ಅನುವಾಗುವಂತೆ ಶಿಬಿರ ಆಯೋಜಿಸಿ ಅರ್ಹರಿಗೆ ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ತಿಳಿಸಬೇಕು ಎಂದರು.ಮೈಸೂರು ನಗರದಲ್ಲಿ ಜೈನ್ ಸಮುದಾಯದವರಿಗೆ ಸ್ಮಾಶನಕ್ಕೆ ಸ್ಥಳದ ಬಗ್ಗೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಮೈಸೂರು ತಹಶೀಲ್ದಾರ್ ಅವರಿಗೆ ಪತ್ರ ಬರೆಯುವಂತೆ ಹಾಗೂ ಬನುಮಯ್ಯ ಕಾಲೇಜು ಬಳಿ ಇರುವ ಜೈನ್ ದೇವಾಲಯದ ಸುತ್ತಳತೆ ಗುರುತಿಸಿಕೊಡಲು ಜಿಲ್ಲೆಯ ಭೂ ದಾಖಲೆಗಳ ಉಪನಿರ್ದೇಶಕರಿಗೆ ಪತ್ರ ಬರೆಯುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…

2 mins ago

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

1 hour ago

ರಷ್ಯಾದ ಸೇನಾ ವಿಮಾನ ಪತನ: 29 ಪ್ರಯಾಣಿಕರು ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…

2 hours ago

ಮುಂದಿನ 2-3 ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್:‌ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

2 hours ago

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

3 hours ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

4 hours ago