Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಅಧಿಕಾರಿ ಸಸ್ಪೆಂಡ್..!

ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 ರಲ್ಲಿ 1.26 ಗುಂಟೆ ಮತ್ತು 444ರ ಸರ್ವೆ ನಂಬರ್ ನಲ್ಲಿ 1.30 ಗುಂಟೆ ಜಮೀನು ಹೊಂದಿದ್ದಾರೆ. ಆದರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಅದೇ ಗ್ರಾಮದ ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ಇಬ್ಬರು ಕೂಡ ಬದುಕಿರುವ ಚಂದ್ರಶೇಖರ್​ ಮೃತಪಟ್ಟಿದ್ದಾರೆ ಎಂದು ತಹಸೀಲ್ದಾರ್​ ಕಚೇರಿಯ ಶಿರಸ್ತೇದಾರ್ ಶ್ರೀನಾಥ್ ಅವರಿಂದ ಮರಣ ಪ್ರಮಾಣ ಪತ್ರ ಪಡೆದಿದ್ದಾರೆ.

ಇದಾದ ನಂತರ ಕಂದಾಯ ಇಲಾಖೆಗೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಶಾಮಿಲಾಗಿ ಚಂದ್ರಶೇಖರ್‌ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಇನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ತೆರಳಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ.

ಈ ವಿಚಾರವೆಲ್ಲಾ ತಿಳಿದಂತಹ ತಿಳಿದ ಚಂದ್ರಶೇಖರ್ ಸಂಬಂಧಿ ಎನ್.ನಾಗರಾಜರಾವ್ ಎಂಬುವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ನಂಜನಗೂಡು ಕಂದಾಯ ಇಲಾಖೆಯ ಗೋಳೂರು ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್, ಶಿರಸ್ತೆದಾರ್ ಶ್ರೀನಾಥ್, ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ವಿರುದ್ಧ ದೂರು ದಾಖಲಾಗಿದೆ.

ಹೀಗಾಗಿ ಈ ಪ್ರಕರಣ ಸಂಬಂಧ ನಕಲಿ ಪ್ರಮಾಣ ಪತ್ರ ನೀಡಿದ್ದ ಶಿರಸ್ತೇದಾರ್ ಶ್ರೀನಾಥ್ ಅವರನ್ನು ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಉಳಿದಿರುವ ಅಧಿಕಾರಿಗಳ ವಿರುದ್ಧ ತನಿಖೆ ನಂತರ ಶಿಸ್ತು ಕ್ರಮಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Tags: