ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 ರಲ್ಲಿ 1.26 ಗುಂಟೆ ಮತ್ತು 444ರ ಸರ್ವೆ ನಂಬರ್ ನಲ್ಲಿ 1.30 ಗುಂಟೆ ಜಮೀನು ಹೊಂದಿದ್ದಾರೆ. ಆದರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಅದೇ ಗ್ರಾಮದ ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ಇಬ್ಬರು ಕೂಡ ಬದುಕಿರುವ ಚಂದ್ರಶೇಖರ್ ಮೃತಪಟ್ಟಿದ್ದಾರೆ ಎಂದು ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀನಾಥ್ ಅವರಿಂದ ಮರಣ ಪ್ರಮಾಣ ಪತ್ರ ಪಡೆದಿದ್ದಾರೆ.
ಇದಾದ ನಂತರ ಕಂದಾಯ ಇಲಾಖೆಗೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಶಾಮಿಲಾಗಿ ಚಂದ್ರಶೇಖರ್ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಇನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ತೆರಳಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ.
ಈ ವಿಚಾರವೆಲ್ಲಾ ತಿಳಿದಂತಹ ತಿಳಿದ ಚಂದ್ರಶೇಖರ್ ಸಂಬಂಧಿ ಎನ್.ನಾಗರಾಜರಾವ್ ಎಂಬುವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ನಂಜನಗೂಡು ಕಂದಾಯ ಇಲಾಖೆಯ ಗೋಳೂರು ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್, ಶಿರಸ್ತೆದಾರ್ ಶ್ರೀನಾಥ್, ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ವಿರುದ್ಧ ದೂರು ದಾಖಲಾಗಿದೆ.
ಹೀಗಾಗಿ ಈ ಪ್ರಕರಣ ಸಂಬಂಧ ನಕಲಿ ಪ್ರಮಾಣ ಪತ್ರ ನೀಡಿದ್ದ ಶಿರಸ್ತೇದಾರ್ ಶ್ರೀನಾಥ್ ಅವರನ್ನು ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಉಳಿದಿರುವ ಅಧಿಕಾರಿಗಳ ವಿರುದ್ಧ ತನಿಖೆ ನಂತರ ಶಿಸ್ತು ಕ್ರಮಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…