siddaramaiah
ಹೊಸದಿಲ್ಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ, ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದರು.
ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ: ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇನೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ ಎಂದು ಮರುಪ್ರಶ್ನಿಸಿದರಲ್ಲದೇ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೆಂದು ತಿಳಿಸಿದ್ದಾರೆ ಎಂದರು.
ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ: ಕಾಂಗ್ರೆಸ್‌ನ ಕೆಲ ಶಾಸಕರೇ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅಭಿಪ್ರಾಯ ತಿಳಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಇದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ ಎಂದರು.
ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯ ಭೇಟಿ: ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಸಂಭವವಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂ ಎಲ್ ಸಿ , ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…