ಮೈಸೂರು : ಅನಧಿಕೃತ ಜಾತಿಗಳನ್ನು ಸೃಷ್ಟಿಸಿ ಹಿಂದೂ ಧರ್ಮವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಯ ಪಟ್ಟಿಯಲ್ಲಿ ಕ್ರಿಶ್ಚಿಯನ್ ಧರ್ಮದೊಂದಿಗೆ ಹಿಂದೂ ಜಾತಿಗಳನ್ನು ಸೇರಿಸಿ ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಒಕ್ಕಲಿಗ ಎಂಬ ಅನಾಧಿಕೃತ ಜಾತಿಗಳನ್ನು ಸೃಷ್ಟಿಸಲಾಗಿದೆ. ತನ್ಮೂಲಕ ಹಿಂದೂ ಧರ್ಮವನ್ನು ದುರ್ಬಲಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ದೂರಿದರು.
ಜಾತಿ ಸಮೀಕ್ಷೆ ಹೆಸರಿನಲ್ಲಿ ಹೊಸ ಜಾತಿಗಳ ಸೃಷ್ಟಿಯು ಹಿಂದೂಗಳ ಮತಾಂತರದ ದೊಡ್ಡ ಷಡ್ಯಂತ್ರದ ಭಾಗವಾಗಿದೆ. ಸರ್ಕಾರವೇ ಇದನ್ನು ಪ್ರೋತ್ಸಾಹಿಸಿದಂತಾಗಿದೆ ಎಂದು ಟೀಕಿಸಿದರಲ್ಲದೇ, ಧರ್ಮದ ಕಾಲಂನಲ್ಲಿ ಹಿಂದೂ ಎಂದು ಉಲ್ಲೇಖಿಸುವಂತೆ ಅವರು ಎಲ್ಲರಿಗೂ ಮನವಿ ಮಾಡಿದರು.





