ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಕ್ರಿಕೆಟ್‌ ಪಂದ್ಯ : ಅಧಿಕಾರಿಗಳ ವಿಚಾರಣೆ

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ.

ಈ ದೃಶ್ಯಗಳು ಪರಿಸರ ಸಂರಕ್ಷಣಾವಾದಿಗಳು ಮತ್ತು ವನ್ಯಜೀವಿ ಕಾರ್ಯಕರ್ತರಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಂತೆ, ನಾಗರಹೊಳೆ ಹುಲಿ ಸಂರಕ್ಷಣಾ ಅಭಯಾರಣ್ಯದ ಅರಣ್ಯಾಧಿಕಾರಿಗಳನ್ನು, ಬೆಂಗಳೂರಿನ ಪ್ರಧಾನ ಕಚೇರಿಯ ಉನ್ನತ ಅಽಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಾನವ-ಪ್ರಾಣಿ ಸಂಘರ್ಷದ ಘಟನೆಗಳು ಹೆಚ್ಚುತ್ತಿರುವ ಹಾಗೂ ಬುಡಕಟ್ಟು ಮತ್ತು ಅರಣ್ಯವಾಸಿಗಳ ಸ್ಥಳಾಂತರ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ನಾಗರಹೊಳೆ ಅರಣ್ಯದೊಳಗಿನ ನಾನಾಚ್ಚಿ ಗೇಟ್ ಬಳಿ ಜನರ ಗುಂಪೊಂದು ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸುತ್ತಿರುವುದು ಕಂಡುಬಂದಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ:-ಶಾಸಕರಿಗೆ ಡಿಸಿಎಂ ಗಾಳ : ಪರಪ್ಪನ ಅಗ್ರಹಾರ ಜೈಲಿಗೆ ಡಿಕೆಶಿ ಭೇಟಿ

ಬುಧವಾರ ಮತ್ತು ಗುರುವಾರ ಪಂದ್ಯಾವಳಿ ನಡೆದಿದ್ದು, ಇದಕ್ಕಾಗಿ ಹೆಚ್ಚಿನ ಪ್ರಮಾಣದ ಗಿಡಗಳನ್ನು ತೆರವುಗೊಳಿಸಲಾಗಿದೆ. ಪಂದ್ಯವನ್ನು ವೀಕ್ಷಿಸಲು ಆಗಮಿಸಿದ ಹೆಚ್ಚಿನ ಸಂಖ್ಯೆಯ ಜನರು ತಮ್ಮ ವಾಹನಗಳನ್ನು ಮೈದಾನದ ಸುತ್ತಲೂ ನಿಲ್ಲಿಸಿ ತೆರೆದ ಸ್ಥಳದಲ್ಲಿ ಊಟ ಮಾಡುತ್ತಿರುವುದು ಕಂಡು ಬಂದಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ ಮಾತ್ರವಲ್ಲದೆ ಅರಣ್ಯ ಸಂರಕ್ಷಣಾ ಕಾಯ್ದೆ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಽಕಾರದ ನಿಯಮಗಳು ಮತ್ತು ಸುಪ್ರೀಂ ಕೋರ್ಟ್ ಆದೇಶಗಳ ಉಲ್ಲಂಘನೆ ಯಾಗಿದೆ ಎಂದು ಅರಣ್ಯ ಸಂರಕ್ಷಣವಾದಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಅರಣ್ಯ ಇಲಾಖೆಗಳಿಗೆ ಯಾವುದೇ ಅರಣ್ಯೇತರ ಚಟುವಟಿಕೆಗಳು ಮತ್ತು ಹಸಿರು ಹೊದಿಕೆಯನ್ನು ತೆರವುಗೊಳಿಸಲು ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿತ್ತು.

ನಾಗರಹೊಳೆ ಹುಲಿ ಮೀಸಲು ನಿರ್ದೇಶಕಿ ಪಿ.ಎ. ಸೀಮಾ ಅವರು ಕಾಡಿನೊಳಗಿನ ಕುಗ್ರಾಮಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದ ಮಕ್ಕಳು ಈ ಪಂದ್ಯವನ್ನು ಆಯೋಜಿಸಿದ್ದರು. ಸ್ಥಳವು ಸಫಾರಿ ಪಾಯಿಂಟ್ ಬಳಿ ಇದೆ. ಅವರು ಕಳೆದ ೧೦ ವರ್ಷಗಳಿಂದ ಅಲ್ಲಿ ಕ್ರಿಕೆಟ್ ಆಡುತ್ತಿದ್ದರು. ೨೦೧೫ ರಿಂದ ಈ ಪ್ರದೇಶದಲ್ಲಿ ಯಾವುದೇ ಮರಗಳನ್ನು ಕಡಿಯಲಾಗಿಲ್ಲ ಮತ್ತು ಮರ ಕಡಿಯಲು ಯಾವುದೇ ಅನುಮತಿಯನ್ನೂ ನೀಡಿಲ್ಲ ಎಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago