ಮೈಸೂರು

ಅಂಧ ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯವಳಿ ; ಬೆಂಗಳೂರು ದೀಪಾ ಅಕಾಡೆಮಿ ಚಾಂಪಿಯನ್‌

ಮೈಸೂರು: ಉತ್ತಮ ಬೌಲಿಂಗ್ ಹಾಗೂ ಬ್ಯಾಟಿಂಗ್ ಪ್ರದರ್ಶನ ನೀಡಿದ ದೀಪಾ ಅಕಾಡೆಮಿ ಬೆಂಗಳೂರು ತಂಡ ಬ್ಲೈಂಡ್ ಗರ್ಲ್ಸ್ ಕ್ರಿಕೆಟ್ ಪಂದ್ಯಾವಳಿಯ ಎರಡನೇ ಆವೃತ್ತಿಯ ಹೆರಿಟೇಜ್ ಕಪ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು.

ನಗರದ ಎಸ್‌ಜೆಸಿಇ ಕ್ಯಾಂಪಸ್‌ನಲ್ಲಿ ನಿರಮಯ ಫೌಂಡೇಶನ್, ಸ್ವಚ್ಛಂದ ಗುಂಪು ಮತ್ತು ಸುರಕ್ಷಾ ಫೌಂಡೇ ಶನ್ನಿನ ಸಹಯೋಗದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮೈಸೂರಿನ ನಿರಮಯ ತಂಡ ದ್ವಿತೀಯ ಸ್ಥಾನ ಪಡೆಯು ವಲ್ಲಿ ಯಶಸ್ವಿಯಾಯಿತು.

ಇದಕ್ಕೂ ಮುನ್ನ ಪಂದ್ಯಾವಳಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು. ಆದಿತ್ಯ ಆಸ್ಪತ್ರೆಯ ಡಾ.ಎನ್. ಚಂದ್ರಶೇಖರ, ಇಕ್ಯೂಲೈಸರ್‌ನ ಮುಖ್ಯಸ್ಥ ಭಾಸ್ಕರ್ ಕಳಲೆ, ಭಾರತೀಯ ಅಂಧ ಕ್ರಿಕೆಟರ್ ಲೋಕೇಶ್, ನಿರಮಯ ಫೌಂಡೇಶನ್ ಸಂಸ್ಥಾಪಕರಾದ ಆರ್.ರಕ್ಷಿತಾ, ಗುರುಪ್ರಿತ್ ಮತ್ತಿತರರು ಹಾಜರಿದ್ದರು. ಪಂದ್ಯ ದಲ್ಲಿ ನಿರಮಯ, ರಂಗರಾವ್ ಶಾಲೆ, ದೀಪಾ ಅಕಾಡೆಮಿ, ಸ್ನೇಹ ಅಕಾಡೆಮಿ ಮಹಿಳಾ ತಂಡಗಳು ಭಾಗವಹಿಸಿದ್ದವು.

AddThis Website Tools
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ.?

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸಿ, ಬೊಬ್ಬಿರಿದಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ತರಿಸಿದ್ದಾನೆ. ಆದರೆ ರಾಜ್ಯದ ಪ್ರಮುಖ…

1 hour ago

ಜಾತಿಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ…

1 hour ago

ಪಂಚ ಭೂತಗಳಲ್ಲಿ ಲೀನರಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌

ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.…

2 hours ago

ಜಾತಿ ಗಣತಿಯಲ್ಲಿ ಮೂಲ ಪ್ರತಿಗಳು ಲಭ್ಯವಿಲ್ಲ: ಆರ್.‌ಅಶೋಕ್‌ ಹೇಳಿಕೆಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

2 hours ago

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ನಟ ಯಶ್‍ ಪೂಜೆ

ಯಶ್‍ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ.…

3 hours ago