ಕೆ.ಆರ್.ನಗರ: ಇಲ್ಲಿನ ಚುಂಚನಕಟ್ಟೆ ಸಮೀಪದ ಮಾಳನಾಯಕನಹಳ್ಳಿ ಬಳಿ ಚಾಮರಾಜ ಎಡದಂಡೆಯ ಕಿರು ನಾಲೆಯಲ್ಲಿ ಕಾಣಿಸಿಕೊಂಡ ಮೊಸಳೆಯನ್ನು ಸೆರೆಹಿಡಿಯಲಾಗಿದೆ.
ಮೊಸಳೆಯನ್ನು ಗಮನಿಸಿದ ಚುಂಚನಕಟ್ಟೆ ನಿವಾಸಿ ಶರತ್, ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೊಸಳೆ ಹಿಡಿಯುವ ತಂಡದ ಸಾಲಿಗ್ರಾಮ ಮಹದೇವ ಹಾಗೂ ಈಜುಗಾರ ಕಪ್ಪಡಿ ಮಧು ಅವರನ್ನು ಸ್ಥಳಕ್ಕೆ ಕರೆಸಲಾಯಿತು.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರ ಉಪಸ್ಥಿತಿಯಲ್ಲಿ ಮಧು ಮತ್ತು ಸ್ನೇಹಿತರು ಬಲೆಹಾಕಿ ಮೊಸಳೆಯನ್ನು ಸೆರೆಹಿಡಿದು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಮೊಸಳೆಗೆ ಆರೋಗ್ಯ ಪರೀಕ್ಷೆ ನಡೆಸಿ, ಡಿಸಿಎಫ್ ಅವರೊಂದಿಗೆ ಚರ್ಚಿಸಿದ ಬಳಿಕ ಕೆಆರ್‌ಎಸ್ ಹಿನ್ನೀರಿನಲ್ಲಿ ಬಿಡಲು ಉದ್ದೇಶಿಸಲಾಗಿದೆ ಎಂದು ಪ್ರಭಾರ ವಲಯ ಅರಣ್ಯಾಧಿಕಾರಿ ಎನ್.ಕೆ. ಪ್ರಸನ್ನ ಕುಮಾರ್ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಹಾಗೂ ಚಿರತೆ ಕಾರ್ಯಪಡೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಸಂವಿಧಾನ ದಿನಾಚರಣೆ ಹೆಸರಲ್ಲಿ ಮೇಲಾಟಕ್ಕೆ ಪ್ರಗತಿಪರ ಚಿಂತಕರು, ಸಂಸ್ಕೃತಿ ಚಿಂತಕರು, ರೈತರು, ಕಾರ್ಮಿಕರ ಬೇಸರ ನವೆಂಬರ್ ೨೬ರಂದು ಮೈಸೂರಿನಲ್ಲಿ ಸಂವಿಧಾನ…
ನವದೆಹಲಿ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಹಿನ್ನಡೆಯಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿರುವ ನ್ಯಾಯಾಲಯ, ಎರಡು…
ಬ್ರೇಕ್ ಬೀಳಬೇಕು ಅತಿಯಾಸೆಗೆ! ಇಲ್ಲಿಂದಲ್ಲಿಗೆ ಅಲ್ಲಿಂದಿಲ್ಲಿಗೆ ಇನ್ನೆಲ್ಲಿಗೆ ಹೋಗಬೇಕೆಂಬುದು ತಿಳಿಯದೆ ವಿಲವಿಲ ಒzಡಿತು ಕಾಡಾನೆ ಪಡೆ!ಹೊಸದೇನಲ್ಲ ಮಾನವ-ವನ್ಯಜೀವಿಗಳ ಸಂಘರ್ಷ! ಬೆಳೆದಂತೆಲ್ಲ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಮೊದಲ ಎರಡು ಸೀಟುಗಳಲ್ಲಿ ವಿಧಾನಸಭಾ ಸದಸ್ಯರು ಮತ್ತು ಲೋಕಸಭಾ ಸದಸ್ಯರು ಹಾಗೂ…
ನವೆಂಬರ್ ೨೬ರಂದು ಆಚರಿಸಲಾಗುವ ಸಂವಿಧಾನ ದಿನಾಚರಣೆ ಕೇವಲ ಸರ್ಕಾರ, ರಾಜಕಾರಣಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸೀಮಿತವಾಗಬಾರದು. ಕಟ್ಟಕಡೆಯ…
ಗಿರಿಧರ ಗುಂಜಗೋಡು, ಐಟಿ ಉದ್ಯೋಗಿ ಮತ್ತು ಪ್ರವಾಸಿ ಲೇಖಕ ಅರಮನೆ ಸುತ್ತಮುತ್ತ ಖಾಸಗಿ ವಾಹನಗಳ ನಿಷೇಧವಿರಲಿ ಮೈಸೂರಿಗರಿಗೆ ಇಲ್ಲಿನ ಇತಿಹಾಸ,…