ಮೈಸೂರು

ಸುಳ್ಳು ಸುದ್ದಿಗೆ ಕಡಿವಾಣ ಅಗತ್ಯ: ಸಿಎಂ ಸಿದ್ದರಾಮಯ್ಯ

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ರೀತ್ಯ ಶಿಕ್ಷೆ: ಸಿಎಂ

ಮೈಸೂರು: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ

ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ನಗರ ಉಪಾಧ್ಯಕ್ಷ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

12 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

40 mins ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

3 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

3 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

3 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago