ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್, ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡುವ ಬರದಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್ ಸವಾರ ಬಸ್‌ನ ಮುಂಭಾಗದ ಚಕ್ರದಡಿ ಸಿಲುಕಿ ಸಾವ್ನಪ್ಪಿದ್ದಾನೆ. ಈ ಘಟನೆಯನ್ನು ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಕುಟುಂಸ್ಥ ಆಕ್ರಂದನ ಮುಗಿಲು ಮುಟ್ಟಿದೆ.
ಈ ಅಪಘಾತದಲ್ಲಿ ಹಂಪಾಪುರದ ಚೆಂದೊಡ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮೃತ ದುರ್ದೈವಿ ಚೆಂದೊಡ್ ಶೆಟ್ಟಿ ಅವರು ಹಂಪಾಪುರ ಗ್ರಾಮದಲ್ಲಿ ಅರ್ಚಕರಾಗಿದ್ದರೆಂದು ಹೇಳಲಾಗಿದೆ.
ಇನ್ನು ಕೆಎಸ್‌ಆರ್‌ಟಿಸಿಯ ಬಸ್ ಅನ್ನು ಅಪಘಾತದ ಸ್ಥಳದಲ್ಲೇ ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಬಿಟ್ಟು ಪರಾರಿಯಾಗಿದ್ದು, ಇಲ್ಲಿನ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…