ಮೈಸೂರು: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿದ್ದ ಅತ್ತೆ ಈರಮ್ಮ ಹಾಗೂ ಸೊಸೆ ಶಾಂತಲಾ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಂತಲಾ ಆಶಾ ಕಾರ್ಯಕರ್ತೆಯಾಗಿದ್ದು, ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು ಕೂಡ ಸುಟ್ಟು ಕರಕಲಾಗಿವೆ.
ಮನೆಯಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.