ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26) ಎನ್ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಮೈಸೂರು ಅರಮನೆ ಬಳಿಯ ಘಟನಾ ಸ್ಥಳಕ್ಕೆ ಎನ್ಐಎ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕಲಿದೆ. ಈ ಮಧ್ಯೆ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು ಇದೀಗ ಎನ್ಐಎ ಸಹ ಭೇಟಿ ನೀಡಿ ಪರಿಶೀಲಿಸುತ್ತಿದೆ.
ಇದನ್ನು ಓದಿ: ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ
ಬಲೂನ್‌ಅನ್ನು ಮಾರಾಟ ಮಾಡಲು ತಂದಿದ್ದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಉತ್ತರ ಪ್ರದೇಶ ಮೂಲಕ ಸಲೀಂ ಎಂಬಾತ ಮೃತಪಟ್ಟಿದ್ದು, ಆತನನ್ನು ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ನೋಡಿರುವುದಾಗಿ ಸ್ಥಳೀಯ ವರ್ತಕರು ತಿಳಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ನೆನ್ನೆ ರಾತ್ರಿ ಮೈಸೂರಿನ ಅರಮನೆ ಜಯ ಮಾರ್ತಾಂಡ ಗೇಟ್ ಬಳಿ ಹೀಲಿಯಂ ಸಿಲಿಂಡರ್ ಸ್ಪೋಟಗೊಂಡು ಬಲೂನ್ ಮಾರುತ್ತಿದ್ದ ಸಲೀಂ ಸಾವನ್ನಪ್ಪಿದ್ದು,ಹಲವರು ಗಂಭೀರ ಗಾಯಗೊಂಡಿದ್ದಾರೆ.



