ಮೈಸೂರು

ಬಡಜನರನ್ನು ಮೇಲೆತ್ತುವ ಕೆಲಸ ಮಾಡಿದವರು ಡಿ ದೇವರಾಜ ಅರಸು; ಸೂರಜ್ ಹೆಗ್ಡೆ

ಮೈಸೂರು: ದೇವರಾಜ ಅರಸು ಅವರು ಬಡಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕಾರ್ಯಗಳನ್ನು ಮಾಡಿದರು. ಆದ್ದರಿಂದಲೇ ರಾಜ್ಯದ ಜನತೆ ಅತ್ಯಂತ ಪ್ರೀತಿ ಗೌರವದಿಂದ ದೇವರಾಜ ಅರಸು ಅವರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ತಿಳಿಸಿದರು.

ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನಗರದ ಜಿಎಲ್‌ವಿ ರಸ್ತೆಯ ಪಕ್ಕದಲ್ಲಿರುವ ಜಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಅರಸು ಪತ್ರಿಕೆಯ 12ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಉದ್ಘಾಟಿಸಿ ಮಾತನಾಡಿದ ಅವರು, ಮುದ್ರಣಾ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ತುಂಬಾ ಸ್ಪರ್ಧೆ ಇದೆ. ಮಾಧ್ಯಮಗಳನ್ನು ನಡೆಸುವುದು ತುಂಬಾ ಕಷ್ಟ ಇದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ದೇವರಾಜ ಅರಸು ಅವರು ತಮ್ಮ ಜೀವಮಾನದ ಪೂರ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತರು. ಅರಸು ಅವರು ಸಾಮಾನ್ಯ ಜನರು, ಬಡವರು, ದಲಿತರ ಸಬಲೀಕರಣಕ್ಕೆ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದರು. ಅರಸು ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಗುತ್ತಿದ್ದಾರೆ ಎಂದು ತಿಳಿಸಿದರು.

ಎಚ್.ಎ.ವೆಂಕಟೇಶ್ ಮಾತನಾಡಿ, ಅತ್ಯಂತ ಹಿಂದುಳಿದ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು ವಿಧಾನ ಸಭೆಯನ್ನು ಪ್ರವೇಶಿಸಲು ಕಾರಣ ಕರ್ತರಾದರು. ದೇವರಾಜ ಅರಸು ಅವರ ಕಾರ್ಯಕ್ರಮಗಳನ್ನು ಜನರು ಮರೆಯುವುದಿಲ್ಲ ಹಾಗೆಯೇ ಅವರನ್ನು ಜನ ಮಾನಸದಿಂದ ಮರೆಮಾಚಲೂ ಸಾಧ್ಯವಿಲ್ಲ ಎಂದು ತಿಳಿಸಿದರು.

ಅರಸು ಅವರ ರಾಜಕೀಯ ವಿರೋಧಿಗಳು ಅವರನ್ನು ಸಾಕಾಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರಿದರು. ತುಂಬಾ ತೊಂದರೆ ಕೊಟ್ಟರು. ಆದರೆ ಅರಸು ಅವರನ್ನು ಸಾಬೀತು ಪಡಿಸಲು ಸಾಧ್ಯವಾಗಲಿಲ್ಲ.

ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಟಿ.ಗುರುರಾಜ್, ರಮೇಶ್ ಸುರ್ವೆ, ಅಖಿಲ ಭಾರತ ಅಂಚೆ ನೌಕರರ ಸಂಘದ ಅಧ್ಯಕ್ಷ ಎನ್.ಕೃಷ್ಣ, ಯೋಗ ಶಿಕ್ಷಕರಾದ ಪ್ರೇಮಾ

ಕಂಠೀರವ ಸ್ಟುಡಿಯೋದ ಮಾಜಿ ಅಧ್ಯಕ್ಷರಾದ ವಿಜಯಲಕ್ಷ್ಮಿ ಅರಸ್, ಅನ್ವೇಷಣಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಆರ್ಯ ಅಮರ್ ನಾಥರಾಜೇ ಅರಸ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago