ಮೈಸೂರು

ಜೆಡಿಎಸ್‌ ಇತಿಹಾಸ ಹೇಳಿದ ಡಿ.ಕೆ.ಶಿವಕುಮಾರ್‌

ಮೈಸೂರು : ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್‌ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ತಿಳಿಸಿದರು.

ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್‌ ಪಕ್ಷದ ಇತಿಹಾಸ ಎಂದು ತಿಳಿಸಿದರು.

ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್‌ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್‌ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.

ವೀಡಿಯೋ ತುಣುಕು

ನೀವು ಕಾಂಗ್ರೆಸ್‌ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್‌ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago