ಮೈಸೂರು

ಮೆಟ್ರೋ ದರ ಏರಿಕೆ| ಕಾಂಗ್ರೆಸ್‌ ಸರ್ಕಾರ, ಕೇಂದ್ರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಬಿಡಲಿ: ಡಿ.ವಿ.ಸದಾನಂದ ಗೌಡ

ಮೈಸೂರು: ಕಾಂಗ್ರೆಸ್‌ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ.

ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) ಭೇಟಿ ನೀಡಿದ ಬಳಿಕ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೆಟ್ರೋ ದರ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ವಿಶೇಷ ಒತ್ತಡ ಹಾಕುವುದು ರಾಜ್ಯ ಸರ್ಕಾರದ ಮೊದಲ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಮೆಟ್ರೋ ದರ ಕಡಿಮೆ ಮಾಡಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ಹಾಗಾಗಿ ಮೆಟ್ರೋ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರವೇ ಒತ್ತಡ ಹೇರಬೇಕು ಎಂದರು.

ರಾಜ್ಯ ಸರ್ಕಾರ ಮೆಟ್ರೋ ದರ ಇಳಿಕೆ ಮಾಡುವ ಸಲುವಾಗಿ ನಮ್ಮನ್ನು ಕರೆದರೆ ನಾವು ಕೇಂದ್ರದ ಬಳಿ ಸರ್ಕಾರದೊಂದಿಗೆ ಜೊತೆಯಾಗಿಯೇ ಹೋಗುತ್ತೇವೆ. ಆದರೆ ಈ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನೂ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಒಂದು ಕೋಮಿನ ಜನರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೆ. ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಸರಿಯಾಗಿ ಕಾನೂನು ಸುವ್ಯವಸ್ಥೆ ನಿಭಾಯಿಸಲು ಬರುತ್ತಿಲ್ಲ ಎಂದು ಲೇವಡಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರ ತಲೆಯಲ್ಲಿ ಕೇವಲ ಮುಡಾ ಪ್ರಕರಣವೇ ತುಂಬಿದ್ದು, ಸಿದ್ದರಾಮಯ್ಯ ಹೆಸರಿನಲ್ಲಿ ಇರುವ ಸಿದ್ದ ಎಂಬುದನ್ನು ತೆಗೆಯಬೇಕಾದ ಸ್ಥಿತಿ ಬಂದಿದೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದಾಗ ಬದಲಾಗಿದ್ದಾರೆ. ಆದರೆ ಪರಮೇಶ್ವರ್‌ ಅವರು ಕೇವಲ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ರಾಜಣ್ಣ, ಜಾರಕಿಹೊಳಿ, ಪರಮೇಶ್ವರ್ ಯಾರು ಮಂತ್ರಿ ಕೆಲಸ ಮಾಡುತ್ತಿಲ್ಲ. ಇವರೆಲ್ಲಾ ಕೇವಲ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್‌ ಅವರ ಪಾಪ ಸ್ವಲ್ಪ ಪರಿಹಾರ ಆಗಿರಬಹುದು

ಪ್ರಯಾಗ್‌ ರಾಜ್‌ನ ಮಹಾಕುಂಭಮೇಳ ಮತ್ತು ಟಿ.ನರಸೀಪುರದ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪುಣ್ಯಸ್ನಾನ ಮಾಡಿರುವುದರಿಂದ ಅವರ ಪಾಪ ಸ್ವಲ್ಪ ಪರಿಹಾರ ಆಗಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿಯಲ್ಲಿನ ಬಣಗಳ ಜಿದ್ದಾಜಿದ್ದಿ ಬಗ್ಗೆ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ ಈ ರೀತಿಯ ಪರಿಸ್ಥಿತಿ ಎದುರಾಗಬಾರದಿತ್ತು. ಆದರೆ ನಮ್ಮಲ್ಲಿ ಆಂತರಿಕ ಅವ್ಯವಸ್ಥೆ ಇದೆ. ಸದ್ಯ ನಮ್ಮ ಪಕ್ಷ ರಾಜ್ಯದಲ್ಲಿ ದಯಾನೀಯ ಸ್ಥಿತಿಯಲ್ಲಿದ್ದು, ಹೈಕಮಾಂಡ್‌ ಮಧ್ಯ ಪ್ರವೇಶಿಸಬೇಕು ಎಂದರು.

 

ಅರ್ಚನ ಎಸ್‌ ಎಸ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago