ಮೈಸೂರು

ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು

ಮೀಸಲಾತಿ ಹೆಚ್ಚಳ ಹೋರಾಟದಲ್ಲಿ ಜಯ: ಸ್ವಾಮೀಜಿಗಳಿಗೆ ಸನ್ಮಾನ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮೈಸೂರಿನಲ್ಲಿ ಮತ್ತೊಮ್ಮೆ ‘ದಲಿತ ಮುಖ್ಯಮಂತ್ರಿ’ ಕೂಗು ಕೇಳಿ ಬಂದಿದೆ.

ರಾಜ್ಯ ಸ್ವಾಭಿಮಾನಿ ಎಸ್‌ಸಿ, ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ಮಾನಸಗಂಗೋತ್ರಿಯ  ಸೆನೆಟ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಸ್‌ಸಿ, ಎಸ್‌ಟಿ ಸಮುದಾಯಗಳ ಸ್ವಾಮೀಜಿಗಳಿಗೆ ಅಭಿನಂದನೆ ಸಲ್ಲಿಸುವ ಸಮಾರಂಭದಲ್ಲಿ ಹಲವು ವರ್ಷಗಳಿಂದ ಕನಸಾಗಿಯೇ ಉಳಿದಿರುವ ದಲಿತ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹಕ್ಕೊತ್ತಾಯ ಕೇಳಿ ಬಂತು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ವಿವಿಧ ಜಾತಿಗಳಾಗಿ ಹರಿದು ಹಂಚಿ ಹೋಗಿದ್ದಾರೆ. ಈ ಎಲ್ಲ ಜಾತಿಗಳು ಒಗ್ಗೂಡಿದರೆ ರಾಜ್ಯ ರಾಜಕಾರಣದ ಚಿತ್ರಣವನ್ನೇ ಬದಲಾಯಿಸಬಹುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ತಮ್ಮ ಸ್ಪರ್ಧೆಯನ್ನು ಕೇವಲ ಮೀಸಲು ಕ್ಷೇತ್ರಕ್ಕೆ ಸೀಮಿತಗೊಳಿಸದೆ ಕರ್ನಾಟಕದಲ್ಲಿರುವ ೨೨೪ ಕ್ಷೇತ್ರಗಳಲ್ಲೂ ಸ್ಪರ್ಧಿಸಬೇಕು ಎಂಬ ಒತ್ತಾಯ ಬಲವಾಗಿ ಕೇಳಿ ಬರುವ ಮೂಲಕ ಮತ್ತೊಮ್ಮೆ ರಾಜಕೀಯ ಪಕ್ಷಗಳಲ್ಲಿರುವ ನಾಯಕರಿಗೆ ದಲಿತ ಸಿಎಂ ಜಪ ಮಾಡುವಂತೆ ಆಗ್ರಹಿಸಲಾಯಿತು.

ಒಗ್ಗಟ್ಟಿದ್ದರೆ ಗೆಲುವು ನಮ್ಮದೇ: ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದೇ ರೀತಿ ರಾಜ್ಯದ ಅಧಿಕಾರವನ್ನು ಪಡೆಯಲು ಎಸ್‌ಸಿ, ಎಸ್‌ಟಿ ಸಮುದಾಯ ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ಇದೆ. ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರು ಯಾವುದೇ ಪಕ್ಷದಿಂದ ನಿಂತರೂ ಅವರನ್ನು ಬೆಂಬಲಿಸುವ ನಿರ್ಧಾರವನ್ನು ಶೋಷಿತ ಸಮುದಾಯದವರು ಮಾಡಬೇಕು ಎಂದು ಹಲವು ಸ್ವಾಮೀಜಿಗಳು ಹೇಳಿದರು.

ಶೋಷಿತ ಸಮುದಾಯದವರು ತಮ್ಮ ಸಮುದಾಯದ ಗುರುಗಳ ನೇತೃತ್ವದಲ್ಲಿ ಹೋರಾಟ ನಡೆಸಬೇಕು. ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಮೀಸಲಾತಿ ಹೋರಾಟಕ್ಕೆ ದೊಡ್ಡ ಜಯ ದೊರೆತಿದೆ. ಈ ರೀತಿ ಎಲ್ಲ ಹೋರಾಟಗಳಲ್ಲಿ ಗೆಲುವು ಸಾಧಿಸಲು ಸ್ವಾಮೀಜಿಗಳ ಮಾರ್ಗದರ್ಶನ ಅವಶ್ಯಕತೆ ಇದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದೂವರೆ ಕೋಟಿ ಜನರು ಇದ್ದಾರೆ. ಜನಸಂಖ್ಯೆಯೇ ನಮ್ಮ ಶಕ್ತಿ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ಪ್ರದರ್ಶಿಸುವ ಅವಶ್ಯಕತೆ ಇದೆ ಎಂದರು.

ಲೇಖಕ ಎಂ.ಗೋಪಿನಾಥ್ ಮಾತನಾಡಿ, ದೇಶದ ಮೂಲ ನಿವಾಸಿಗಳು ಯಜಮಾನರಾಗಬೇಕಾಗಿತ್ತು. ಆದರೆ, ಏತಕ್ಕೆ ಅವರು ಗುಲಾಮರಾದರು ಎಂಬುದು ಗೊತ್ತಿಲ್ಲ. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟದ ಹಾದಿ ತುಳಿಯಬೇಕು ಎಂದು ಕರೆ ನೀಡಿದರು.

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗಿ ದೇವ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸಂತ ಸೇವಾಲಾಲ್ ಸ್ವಾಮೀಜಿ, ಮುಡುಕುತೊರೆ ಮಠದ ಶ್ರೀ ಸಿದ್ದರಾಮ ಶಿವಯೋಗಿ ಸ್ವಾಮೀಜಿ, ಭೋವಿ ಮಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಮತ್ತಿತರ ಮುಖಂಡರು ಹಾಜರಿದ್ದರು.

ಅಂಬೇಡ್ಕರ್ ನಮಗೆ ನೀಡಿದ ಸಂವಿಧಾನವನ್ನು ನಾವು ಬೇರೆಯವರಿಗೆ ನೀಡುವ ಮೂಲಕ ಇಂದಿಗೂ ಶೋಷಣೆಗೆ ಗುರಿಯಾಗುತ್ತಿದ್ದೇವೆ. ಈ ಶೋಷಣೆಯಿಂದ ವಿಮೋಚನೆ ಹೊಂದಲು ನಾವು ಮುಖ್ಯಮಂತ್ರಿ ಪಟ್ಟವನ್ನು ಪಡೆಯಲು ಶ್ರಮಿಸಬೇಕು.

-ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಉರಿಲಿಂಗಿ ಪೆದ್ದಿ ಮಠ, ಗಾಂಧಿನಗರ

 

 

 

andolana

Recent Posts

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

4 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

4 hours ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

4 hours ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

4 hours ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

4 hours ago