ಮೈಸೂರು: ಮೈಸೂರು ತಾಲೂಕು ವರುಣಾ ಹೋಬಳಿಯ ಪಿಲ್ಲಹಳ್ಳಿ ಗ್ರಾಮದಲ್ಲಿರುವ ದಂಡಿಮಾರಮ್ಮ ದೇವಾಲಯವನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಉದ್ಘಾಟಿಸಿದರು.
ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ತಿಮ್ಮಯ್ಯ, ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿದಂತೆ ಹಲವರು ಸಾಥ್ ನೀಡಿದರು.
ಬಳಿಕ ಜ್ಯೋತಿ ಬೆಳಗಿಸಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಂತೋಷದಿಂದ ದಂಡಿ ಮಾರಮ್ಮ ದೇವಸ್ಥಾನವನ್ನು ಉದ್ಘಾಟನೆ ಮಾಡಿದ್ದೇನೆ. ಕಾರ್ಯಕ್ರಮಕ್ಕೆ ಬರಲೇಬೇಕು ಅಂತ ಪಿಲ್ಲಹಳ್ಳಿ ಗ್ರಾಮದವರು ಒತ್ತಾಯ ಮಾಡಿದ್ರು. ದೇವರು ಕೇವಲ ದೇವಸ್ಥಾನ ಒಳಗೆ ಇರುತ್ತಾನೆ ಎನ್ನುವುದು ಎಲ್ಲರ ನಂಬಿಕೆ. ಆ ನಂಬಿಕೆಗೆ ನನ್ನ ವಿರೋಧವಿಲ್ಲ. ದೇವರು ಎಲ್ಲಾ ಕಡೆ ಇದ್ದಾನೆ ಎನ್ನುವುದು ನನ್ನ ಅಚಲ ನಂಬಿಕೆಯಾಗಿದೆ. ನಾನು ಚುನವಣೆಗೆ ನಿಂತ ಸಮಯದಲ್ಲಿ ನನ್ನನ್ನು 83 ರಿಂದ ಗೆಲ್ಲಿಸಿಕೊಂಡು ಬಂದ್ರಿ. ಮೈಸೂರು ತಾಲ್ಲೂಕಿನ ಜನರ ಋಣವನ್ನು ಎಂದು ಕೂಡ ಮರೆಯುವುದಿಲ್ಲ. ನೀವು ಗೆಲ್ಲಿಸಿದ ಕಾರಣದಿಂದ ರಾಜ್ಯದ ಮುಖ್ಯಮಂತ್ರಿಯಾಗುವುದಕ್ಕೆ ಸಾಧ್ಯವಾಯಿತು. ಕೇವಲ ನನ್ನ ವ್ಯಕ್ತಿತ್ವ ಇದ್ದರೆ ಮುಖ್ಯಮಂತ್ರಿಯಾಗುವುದಕ್ಕೆ ಸಾಧ್ಯವಿಲ್ಲ. ಅದಕ್ಕೆ ಜನರ ಅರ್ಶಿವಾದ ಇರಬೇಕು. ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರಿಗೆ ನಾನು ಯಾವಾಗಲೂ ಕೃತಜ್ಞತೆಯ ಭಾವದಿಂದ ಇರುತ್ತೇನೆ. ಪಿಲ್ಲಹಳ್ಳಿ ಗ್ರಾಮದ ಜನ ನನ್ನನ್ನು ಯಾವತ್ತು ಕೈ ಬಿಟ್ಟಿಲ್ಲ. ನಿಮ್ಮ ಸಂಬಂಧ ನನ್ನನ್ನು ಇವತ್ತು ದೇವಸ್ಥಾನದ ಉದ್ಘಾಟನೆಗೆ ಬರುವುದಕ್ಕೆ ಕಾರಣವಾಗಿದೆ. ನಾನು ವೋಟು ಕೇಳಲು ಬರದೇ ಇದ್ರು ನೀವು ನನಗೆ ವೋಟು ಹಾಕುತ್ತೀರ. ದಂಡಿನಮಾರಮ್ಮ ದೇವಸ್ಥಾನ ನಮ್ಮ ಊರಿನಲ್ಲೂ ಇದೆ. ನಾನು ಚಿಕ್ಕವನಿಂದಾಗ ತಂಬಿಟ್ಟು ಅರತಿ ತೆಗೆದುಕೊಂಡು ಹೋಗುತ್ತಿದ್ದೇವು ಎಂದು ಬಾಲ್ಯದ ನೆನಪನ್ನು ಮೆಲುಕು ಹಾಕಿದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…