ಮೈಸೂರು

ಸಂಪುಟ ಸಭೆಯಲ್ಲಿ ದರ್ಶನ್‌ ಪ್ರಕರಣ ಚರ್ಚೆಯಾಯ್ತಾ? ಹೆಚ್‌ಸಿ ಮಹದೇವಪ್ಪ ಹೇಳಿದ್ದಿಷ್ಟು

ಮೈಸೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಹತ್ಯೆ ಪ್ರಕರಣವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಂಡ್‌ ಗ್ಯಾಂಗ್‌ ಕೃತ್ಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ.ಮಹದೇವಪ್ಪ ಅವರು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಕರಣವನ್ನು ಚರ್ಚೆ ಮಾಡಿಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ತಕ್ಕ ಶಿಕ್ಷೆ ಆಗೇ ಆಗುತ್ತದೆ. ತಪ್ಪಿತಸ್ಥರಿಗೆಲ್ಲರಿಗೂ ಕಾನೂನು ರೀತಿಯಲ್ಲಿ ಶಿಕ್ಷೆಯಾಗಲಿದೆ. ಈ ನಿಟ್ಟಿನಲ್ಲಿ ಪೊಲೀಸರು ಕೂಡ ಹೆಚ್ಚಿನ ನಿಗಾ ವಹಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ಮುಂದುವರಿದಿದ್ದು, ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಮಾಹಿತಿ ಹೊರಬರುತ್ತಿದೆ. ನಟ ದರ್ಶನ್‌ ಈ ರೀತಿ ಮಾಡಿದ್ದಾರೆ ಅಂದರೆ ಯಾರೂ ಕೂಡ ನಂಬಕ್ಕಾಗಲ್ಲ. ಈ ರೀತಿಯ ಘಟನೆಯಿಂದ ಇಡೀ ಚಿತ್ರರಂಗ ತಲೆತಗ್ಗಿಸುವಂತಾಗಿದೆ, ಕಾನೂನು ಎಲ್ಲರಿಗೂ ಒಂದೇ, ಹಾಗಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗೇ ಆಗುತ್ತೆ ಎಂದರು.

andolana

Recent Posts

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…

25 mins ago

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

1 hour ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

2 hours ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

2 hours ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

3 hours ago

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

6 hours ago