ನಂಜನಗೂಡು : ಆರ್.ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವ ಅವರಿಗೆ ರಾಜಕೀಯ ಅನಿವಾರ್ಯವಲ್ಲ. ಆದರೆ ನಂಜನಗೂಡು ಕಾಂಗ್ರೆಸ್‍ಗೆ ದರ್ಶನ್ ಧ್ರುವ ಅನಿವಾರ್ಯವಾಗಿದ್ದು, ಸದ್ಯ ಅವರ ಬಳಿ ಈ ಬಗ್ಗೆ ಕೂಲಂಕುಶವಾಗಿ ಮಾತನಾಡುವ ಪರಿಸ್ಥಿತಿಯಲ್ಲಿ ಅವರಿಲ್ಲ. ಶೀಘ್ರವೇ ಅವರಿಗೆ ನಿಮ್ಮೆಲ್ಲರ ಅಭಿಪ್ರಾಯವನ್ನು ಮನವರಿಕೆ ಮಾಡಿ ಕ್ಷೇತ್ರಕ್ಕೆ ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಕಂಠ ಭಾವುಕವಾಗಿ ನುಡಿದರು.
ನಗರದ ನಂದಿ ಕನ್ವೆನ್ಶನ್ ಹಾಲ್‍ನಲ್ಲಿ ಮಂಗಳವಾರ ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ 9 ಜಿಲ್ಲೆಗಳಲ್ಲಿ ನಿರಂತರವಾಗಿ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿ ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂದು ಶಿಫಾರಸ್ಸು ಮಾಡುವ ಅಧಿಕಾರ ಹೊಂದಿದ್ದ ಆರ್.ಧ್ರುವನಾರಾಯಣ ಅವರು ಕತ್ತೆ ಅಚಿತೆ ಪಕ್ಷಕ್ಕೆ ದುಡಿಯುತ್ತಿದ್ದರು.
ಅವರು ಸ್ಪರ್ಧಿಸಲು ಬಯಸಿದ್ದ ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ ಅವರ ಒಬ್ಬರ ಹೆಸರನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂಬ ಬೇಸರ ನನಗೂ ಇದೆ. ಲಕ್ಷ್ಮಣ ರೇಖೆ ಮೀರಿದ ವರ್ತನೆಗಳು ಹಾಗೂ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದರಿಂದ ಒತ್ತಡಕ್ಕೆ ಸಿಲುಕಿದ್ದರು. ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಹೊರಗೇ ಹಾಕದೇ ನಗುಮುಖದಲ್ಲೇ ಎಲ್ಲರೊಂದಿಗೂ ಮಾತನಾಡುತ್ತಿದ್ದರು. ಇದರಿಂದ ಗುಣಮುಖ ಆಗಿದ್ದ ಕಾಯಿಲೆಗಳು ಉಲ್ಬಣಗೊಂಡು ನಮ್ಮಿಂದ ದೂರ ಆಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂತಹ ಸಂದರ್ಭದಲ್ಲಿ ಅವರನ್ನು ನಂಬಿರುವ ನಂಜನಗೂಡು ಕ್ಷೇತ್ರದ ಕಾರ್ಯಕರ್ತರಿಗೆ ಅವರ ಪ್ರತಿರೂಪವಾಗಿ ಅವರ ಪುತ್ರ ದರ್ಶನ್ ಧ್ರುವ ಕಾಂಗ್ರೆಸ್‍ಗೆ ಅನಿವಾರ್ಯವಾಗಿದ್ದಾರೆಯೇ ಹೊರತು ದರ್ಶನ್‍ಗೆ ರಾಜಕೀಯ ಅನಿವಾರ್ಯವಲ್ಲ. ಏಕೆಂದರೆ ಅವರು ವಿದೇಶದಲ್ಲಿ ಕಾನೂನು ಪದವಿ ವ್ಯಾಸಂಗ ಮಾಡಿ ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಕೃಷಿಯಲ್ಲೂ ಸq್ರಯರಾಗಿದ್ದಾರೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾವಿನ ಅಘಾತದಿಂದ ಹೊರ ಬಂದ ಬಳಿಕ ದರ್ಶನ್ ಧ್ರುವ ಅವರೊಂದಿಗೆ ಸಮಾಲೋಚಿಸಿ ತಂದೆಯ ಸ್ಥಾನವನ್ನು ತುಂಬುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ನಂಜನಗೂಡಿನಲ್ಲಿ ಶ್ರದ್ಧಾಂಜಲಿ ಸಭೆಯನ್ನು ಯುಗಾದಿ ಹಬ್ಬದ ಬಳಿಕ ಆಯೋಜನೆ ಮಾಡಲಾಗುವುದು. ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮ ಮಾಡಲು ಉದ್ದೇಶಿಸಲಾಗಿದ್ದು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರನ್ನು ಶ್ರದ್ಧಾಂಜಲಿ ಸಭೆಗೆ ಆಹ್ವಾನಿಸುವ ಜವಬ್ದಾರಿಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಂಠು ಹಾಗೂ ಎಸ್.ಸಿ.ಬಸವರಾಜು ಅವರು ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಬಸವರಾಜು, ಕ್ಷೇತ್ರ ಉಸ್ತುವಾರಿಗಳಾದ ಹೀರೇಹಳ್ಳಿ ಸೋಮೇಶ್, ಬಿ.ಕೆ.ರವಿಕುಮಾರ್, ರಾಜ್ಯ ಕಾಂಗ್ರೆಸ್ ಎಸ್ಟಿ ಉಪಾಧ್ಯಕ್ಷ ದೊರೆಸ್ವಾಮಿನಾಯ್ಕ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಲತಾಸಿದ್ದಶೆಟ್ಟಿ, ಬಿಸಿಎಂ ಜಿಲ್ಲಾಧ್ಯಕ್ಷ ಕೆ.ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಶ್ರೀಕಂಠನಾಯ್ಕ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‍ರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಂ.ಮಾದಪ್ಪ, ಮುದ್ದುಮಾದಶೆಟ್ಟಿ ಸೇರಿದಂತೆ ಇತರರಿದ್ದರು.
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…