ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್ ಹಾಕಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.
ಈ ಬೆನ್ನಲ್ಲೇ ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್‌ನ ಮುಂದೆ ಅಳವಡಿಸಿರುವ ಬೋರ್ಡ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂದು ಬರೆಸಲಾಗಿದೆ.
ಇದನ್ನು ಓದಿ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್
ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಈಗ ತೋಟದಲ್ಲಿ ಕುದುರೆ ನೋಡಿಕೊಳ್ಳಲು ಆಗದೇ ಮಾರಾಟ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಫಾರ್ಮ್ ಹೌಸ್‌ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿರುವ ನಟ ದರ್ಶನ್ ಅವರು, ಈಗ ಕುದುರೆ ಮಾರಾಟಕ್ಕಿವೆ ಎಂದು ಬೋರ್ಡ್‌ನಲ್ಲಿ ಬರೆಸಿದ್ದಾರೆ. ಸದ್ಯ ತೋಟದ ಮುಂಭಾಗದ ಬೋರ್ಡ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಕೊಲೆ ಆರೋಪದಲ್ಲಿ ದರ್ಶನ್ ಜೈಲು ಪಾಲಾದ ಹಿನ್ನೆಲೆಯಲ್ಲಿ ಕುದುರೆಗಳನ್ನು ಮಾರಾಟ ಮಾಡಲು ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…