ಮೈಸೂರು

ದರ್ಶನ್ ಕುದುರೆಗಳು ಮಾರಾಟಕ್ಕಿವೆ: ಸೋಷಿಯಲ್‌ ಮೀಡಿಯಾದಲ್ಲಿ ಬೋರ್ಡ್‌ ವಿಡಿಯೋ ವೈರಲ್‌

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ದರ್ಶನ್‌ ಫಾರ್ಮ್‌ ಹೌಸ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂಬ ಬೋರ್ಡ್‌ ಹಾಕಿಸಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ.

ಈ ಬೆನ್ನಲ್ಲೇ ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್‌ ಫಾರ್ಮ್‌ ಹೌಸ್‌ನ ಮುಂದೆ ಅಳವಡಿಸಿರುವ ಬೋರ್ಡ್‌ನಲ್ಲಿ ಕುದುರೆಗಳು ಮಾರಾಟಕ್ಕಿವೆ ಎಂದು ಬರೆಸಲಾಗಿದೆ.

ಇದನ್ನು ಓದಿ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌

ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌, ಈಗ ತೋಟದಲ್ಲಿ ಕುದುರೆ ನೋಡಿಕೊಳ್ಳಲು ಆಗದೇ ಮಾರಾಟ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಫಾರ್ಮ್‌ ಹೌಸ್‌ನಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿರುವ ನಟ ದರ್ಶನ್‌ ಅವರು, ಈಗ ಕುದುರೆ ಮಾರಾಟಕ್ಕಿವೆ ಎಂದು ಬೋರ್ಡ್‌ನಲ್ಲಿ ಬರೆಸಿದ್ದಾರೆ. ಸದ್ಯ ತೋಟದ ಮುಂಭಾಗದ ಬೋರ್ಡ್ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಕೊಲೆ ಆರೋಪದಲ್ಲಿ ದರ್ಶನ್‌ ಜೈಲು ಪಾಲಾದ ಹಿನ್ನೆಲೆಯಲ್ಲಿ ಕುದುರೆಗಳನ್ನು ಮಾರಾಟ ಮಾಡಲು ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

2 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago