ಮೈಸೂರು : ಜನ ಸಂದಣಿ ಇರುವ ಪ್ರದೇಶಗಳಲ್ಲಿ ಯಾವುದೇ ಅವಘಡಗಳು ಸಂಬಂಧಿಸಿದಂತೆ ತಡೆಯಲು ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಪಾಲನೆಯನ್ನು ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜನ ಸಂದಣಿ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಕುರಿತಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಸರಾ ಆಚರಣೆಯ ಯುವ ಸಂಭ್ರಮ, ಯುವ ದಸರಾ, ಅರಮನೆ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಸರಾ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ಸಮಯ, ಕಾರ್ಯಕ್ರಮದ ವಿವರಗಳ ಮಾಹಿತಿಯನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡಬೇಕು. ಜನಸಂದಣಿ ಆಗದಂತೆ ಅಗತ್ಯ ಸೂಚನೆಗಳನ್ನು ಆಗಾಗ್ಗೆ ಸಾರ್ವಜನಿಕರಿಗೆ ನೀಡುತ್ತಿರಬೇಕು. ಜನಸಂದಣಿ ಇರುವ ಪ್ರದೇಶಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನಸಂದಣಿ ಉಂಟಾಗದಂತೆ ಪೋಲಿಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿ.ಸಿ.ಪಿ ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…