Mysore
27
scattered clouds
Light
Dark

ದಸರಾ ಚಲನಚಿತ್ರೋತ್ಸವ 2024 – ಕಿರುಚಿತ್ರಗಳ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ದಸರಾ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಕಿರುಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ “ಕಿರುಚಿತ್ರ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ.

ಕಿರುಚಿತ್ರವು 10 ರಿಂದ 15 ನಿಮಿಷಗಳ ಅವಧಿಗೆ ಸೀಮಿತವಾಗಿ ನಿರ್ಮಿಸಿರುವ ಕಿರುಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ಅತ್ಯತ್ತಮ 3 ಕಿರುಚಿತ್ರಗಳಿಗೆ ಪ್ರಮಾಣಪತ್ರ ಹಾಗೂ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಿ ಗೌರವ ಸಲ್ಲಿಸಲಾಗುವುದು.

ಸ್ಪರ್ಧೆಯಲ್ಲಿ ಭಾಗವಹಿಸಲು ದಿನಾಂಕ: 12-09-2024ರಂದು ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್.ಈ ದೂರವಾಣಿ ಸಂಖ್ಯೆ 7892543852 ಸಂಪರ್ಕಿಸುವಂತೆ ದಸರಾ ಚಲನಚಿತ್ರೋತ್ಸವ
-2024 ಉಪ ಸಮಿತಿಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ. ಹರೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.