ಮೈಸೂರು

ದಸರಾ | ಬರಲಿವೆ ಮೈಸೂರಿಗೆ ವಿಶೇಷ ರೈಲು

ಮೈಸೂರು : ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ದಸರಾ ಹಬ್ಬದ ವೈಭವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶ ಹಾಗೂ ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ.

ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ, ದಿನಾಂಕ, ಸ್ಥಳ ಸೇರಿದಂತೆ ಸಂಪೂರ್ಣ ಮಾಹಿತಿ ಹೀಗಿದೆ…

ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ–ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು
ರೈಲು ಸಂಖ್ಯೆ 06271 2025ರ ಸೆಪ್ಟೆಂಬರ್ 30ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06272 2025ರ ಅಕ್ಟೋಬರ್ 1 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್‌ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಮೈಸೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು
ರೈಲು ಸಂಖ್ಯೆ 06273 2025ರ ಅಕ್ಟೋಬರ್ 2ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06274 2025ರ ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು
ರೈಲು ಸಂಖ್ಯೆ 06275 2025ರ ಅಕ್ಟೋಬರ್ 4 ರಂದು ಬೆಂಗಳೂರಿನ ಎಸ್‌ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 06276 2025ರ ಅಕ್ಟೋಬರ್ 5ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್‌ಎಂವಿಟಿಗೆ ತಲುಪಲಿದೆ.

ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ಎಲ್ಲಾ ರೈಲುಗಳು ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌/ಡಿ ಬೋಗಿಗಳು ಇರಲಿವೆ.

ದಸರಾ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಹಾಗೂ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

1 hour ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

1 hour ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

1 hour ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

1 hour ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 hour ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

1 hour ago