ಮೈಸೂರು

ಡೆಂಗ್ಯೂ ಕುರಿತು ಆತಂಕ ಬೇಡ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ : ಡಾ.ಕೆ.ವಿ ರಾಜೇಂದ್ರ

ಮೈಸೂರು :  ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಾ ಇದ್ದು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು,  3493 ಜನರಿಗೆ ಪರೀಕ್ಷೆ ನಡೆಸಿದ್ದು ಇದರಲ್ಲಿ  481 ಜನರಿಗೆ ಡೆಂಗ್ಯೂ ಪ್ರಕರಣಗಳು ಕಂಡು ಬಂದಿದ್ದು  14% ಪ್ರಕರಣಗಳು ಕಂಡು ಬಂದಿವೆ. ಫೆಬ್ರವರಿ ಮಾರ್ಚ್ ಏಪ್ರಿಲ್ ನಲ್ಲಿ 18% ಇದ್ದು ಈಗ 11% ಗೆ ಡೆಂಗ್ಯೂ ಪ್ರಕರಣಗಳು ಇಳಿದಿವೆ ಎಂದು ತಿಳಿಸಿದರು.

ಅಲ್ಲದೆ ನಮ್ಮಲ್ಲಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣದಲ್ಲಿ ಇವೆ. ಇದು ಹೆಚ್ಚಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ. ಡೆಂಗ್ಯೂ ಸೊಳ್ಳೆಗಳ ಕಡಿತದಿಂದ ಬರುತ್ತದೆ. ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿ  ಆಗುತ್ತವೆ.  ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು.  ಜನರಿಗೆ ಈ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಪ್ರಕರಣಗಳು ಕಂಡುಬಂದರೆ ಮಾಹಿತಿ ನೀಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಚಿಕಿತ್ಸೆಗೆ ನಿಗದಿತ ದರವನ್ನು ಮಾತ್ರ ವಿಧಿಸಬೇಕು. ಹೆಚ್ಚಿನ ದರ ಪಡೆದರೆ ಸಂಬಂಧಿಸಿದ ಆಸ್ಪತ್ರೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

34 mins ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

2 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago