Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಆಷಾಢ ಮಾಸಕ್ಕೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಈ ವರ್ಷ ಜುಲೈ 17ರಂದು ಮೊದಲನೇ ಆಷಾಢ ಶುಕ್ರವಾರ, 19ರಂದು ಎರಡನೇ ಆಷಾಢ ಶುಕ್ರವಾರ, ಜುಲೈ.26ರಂದು ಮೂರನೇ ಆಷಾಢ ಶುಕ್ರವಾರ, 27ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ ಹಾಗೂ ಆಗಸ್ಟ್ 2ರಂದು ಕೊನೆಯ ಆಷಾಢ ಶುಕ್ರವಾರವಿದೆ. ಈ ಎಲ್ಲಾ ದಿನಗಳಂದು ಚಾಮುಂಡಿಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ಪ್ರಸಾದ ವ್ಯವಸ್ಥೆ, ಕುಡಿಯುವ ನೀರು, ವಾಹನಗಳ ಪಾರ್ಕಿಂಗ್, ಪ್ಲಾಸ್ಟಿಕ್ ಬಳಕೆ ಸೇರಿದಂತೆ ಎಲ್ಲಾ ರೀತಿಯಲ್ಲೂ ಸಕಲ ಸಿದ್ಧತೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಕೆ.ಎಂ.ಗಾಯತ್ರಿ, ಉಪ ಪೊಲೀಸ್ ಆಯುಕ್ತ ಮುತ್ತುರಾಜ್, ಜಾಹ್ನವಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

Tags: