ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಈ ವರ್ಷ ಜುಲೈ 17ರಂದು ಮೊದಲನೇ ಆಷಾಢ ಶುಕ್ರವಾರ, 19ರಂದು ಎರಡನೇ ಆಷಾಢ ಶುಕ್ರವಾರ, ಜುಲೈ.26ರಂದು ಮೂರನೇ ಆಷಾಢ ಶುಕ್ರವಾರ, 27ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ ಹಾಗೂ ಆಗಸ್ಟ್ 2ರಂದು ಕೊನೆಯ ಆಷಾಢ ಶುಕ್ರವಾರವಿದೆ. ಈ ಎಲ್ಲಾ ದಿನಗಳಂದು ಚಾಮುಂಡಿಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ಪ್ರಸಾದ ವ್ಯವಸ್ಥೆ, ಕುಡಿಯುವ ನೀರು, ವಾಹನಗಳ ಪಾರ್ಕಿಂಗ್, ಪ್ಲಾಸ್ಟಿಕ್ ಬಳಕೆ ಸೇರಿದಂತೆ ಎಲ್ಲಾ ರೀತಿಯಲ್ಲೂ ಸಕಲ ಸಿದ್ಧತೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಕೆ.ಎಂ.ಗಾಯತ್ರಿ, ಉಪ ಪೊಲೀಸ್ ಆಯುಕ್ತ ಮುತ್ತುರಾಜ್, ಜಾಹ್ನವಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…