ಮೈಸೂರು: ಮತದಾನ ನೊಂದಣಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಜಿಪಂ ಸಿಇಓ ಕೆ.ಎಂ.ಗಾಯಿತ್ರಿ ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮೈಸೂರು ಮಹಾನಗರ ಪಾಲಿಕೆ ಹಾಗೂ ರೋಟರಿ ಐವರಿ ಸಿಟಿ, ಮೈಸೂರು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಡಿಸೆಂಬರ್ 2 ಮತ್ತು 3 ರಂದು ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಬೂತ್ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ತಪ್ಪದೇ ಸಾರ್ವಜನಿಕರು, ಯುವ ಮತದಾರರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು.ವೋಟರ್ ಹೆಲ್ಪ್ ಲೈನ್ ಆಪ್ ಮೂಲಕವೇ ಯುವ ಮತದಾರರು ಅರ್ಜಿ ಸಲ್ಲಿಸಬಹುದು ಹಾಗೂ ಮತಗಟ್ಟೆಯ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಯುವಜನತೆ ಮತದಾನದಲ್ಲಿ ಹೆಚ್ಚು ಪಾಲ್ಗೊಳ್ಳಲು ಹಾಗೂ ಅವರ ಹಕ್ಕಿನ ಬಗ್ಗೆ ಪ್ರೇರೇಪಿಸಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಪಂ ಸಿಇಒ ಕೆ.ಎಂ.ಗಾಯಿತ್ರಿ ಮಾತನಾಡಿ, ನಗರ ಪ್ರದೇಶದಲ್ಲಿ ಮತದಾನದಲ್ಲಿ ಭಾಗವಹಿಸುವಿಕೆ ಕಡಿಮೆ ಇರುವ ಕಾರಣ, ಇಂತಹ ಕಾರ್ಯಕ್ರಮಗಳ ಮೂಲಕ ನೊಂದಣಿ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಹೆಚ್ಚೆಚ್ಚು ಜನರು ಹಾಗೂ ಯುವ ಮತದಾರರು ಭಾಗವಹಿಸಬೇಕು. ಆ ಮೂಲಕ ಆರೋಗ್ಯಕರ ಮತದಾನ ಪಟ್ಟಿ ತಯಾರಿಕೆಗೆ ಅನುವಾಗುತ್ತದೆ ಎಂದರು.
ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪ್ರಾರಂಭವಾದ ಜಾಥ, ನಗರದ ಚಿಕ್ಕಗಡಿಯಾರ ವೃತ್ತದಲ್ಲಿ ಅಂತ್ಯಗೊಂಡಿತು.
ವಿವಿಧ ಸಂಘ ಸಂಸ್ಥೆಯಿಂದ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಉಪಆಯುಕ್ತರಾದ ಸೋಮಶೇಖರ್, ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು, ಕ್ರೀಡಾಪಟು ಖುಷಿ ಸೇರಿದಂತೆ ಇತರರು ಹಾಜರಿದ್ದರು.
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…