Mysore
28
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

2024-25ನೇ ಸಾಲಿನ WDC-2.0 ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ

ಮೈಸೂರು: ಬೆಳೆ ವಿಮೆ, ರೈತ ಆತ್ಮಹತ್ಯೆ ಮೇಲ್ಮನವಿ ಇತ್ಯರ್ಥ ಹಾಗೂ ಜಲಾನಯನ ಅಭಿವೃದ್ದಿ ಯೋಜನೆಯ ಕ್ರಿಯಾ ಯೋಜನೆಗೆ ಅನುಮೋನದೆ ಸಂಬಂಧ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರು ರೈತ ಆತ್ಮಹತ್ಯೆ ಹಾಗೂ ಆಕಸ್ಮಿಕ ಮರಣ ಸಂಬಂಧ 3 ತಿಂಗಳು ಮೇಲ್ಪಟ್ಟ ಆತ್ಮಹತ್ಯೆ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಮಿತಿಯು ಪ್ರಕರಣಗಳನ್ನು ಇತ್ಯರ್ಥ ಮಾಡಿದರು.

2022-23ನೇ ಸಾಲಿನಲ್ಲಿ ಬೆಳೆ ವಿಮೆಗೆ ನೊಂದಣಿ ಮಾಡಿಕೊಂಡಿದ್ದ ರೈತರಲ್ಲಿ ಬೆಳೆ ಸಮೀಕ್ಷೆಗೆ ತಾಳೆಯಾಗದೇ ಇರುವ ಪ್ರಕರಣಗಳನ್ನು ತಿರಸ್ಕೃತ ಹಾಗೂ ತಾಳೆಯಾಗಿರುವ ಪ್ರಕರಣಗಳನ್ನು ಅರ್ಹವೆಂದು ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ – WDC-2.0 ಯೋಜನೆಯ 2024-25ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ನಿಡಿದರು. ಸಭೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!