ಮೈಸೂರು: ಬೆಳೆ ವಿಮೆ, ರೈತ ಆತ್ಮಹತ್ಯೆ ಮೇಲ್ಮನವಿ ಇತ್ಯರ್ಥ ಹಾಗೂ ಜಲಾನಯನ ಅಭಿವೃದ್ದಿ ಯೋಜನೆಯ ಕ್ರಿಯಾ ಯೋಜನೆಗೆ ಅನುಮೋನದೆ ಸಂಬಂಧ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರು ರೈತ ಆತ್ಮಹತ್ಯೆ ಹಾಗೂ ಆಕಸ್ಮಿಕ ಮರಣ ಸಂಬಂಧ 3 ತಿಂಗಳು ಮೇಲ್ಪಟ್ಟ ಆತ್ಮಹತ್ಯೆ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಮಿತಿಯು ಪ್ರಕರಣಗಳನ್ನು ಇತ್ಯರ್ಥ ಮಾಡಿದರು.
2022-23ನೇ ಸಾಲಿನಲ್ಲಿ ಬೆಳೆ ವಿಮೆಗೆ ನೊಂದಣಿ ಮಾಡಿಕೊಂಡಿದ್ದ ರೈತರಲ್ಲಿ ಬೆಳೆ ಸಮೀಕ್ಷೆಗೆ ತಾಳೆಯಾಗದೇ ಇರುವ ಪ್ರಕರಣಗಳನ್ನು ತಿರಸ್ಕೃತ ಹಾಗೂ ತಾಳೆಯಾಗಿರುವ ಪ್ರಕರಣಗಳನ್ನು ಅರ್ಹವೆಂದು ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ – WDC-2.0 ಯೋಜನೆಯ 2024-25ನೇ ಸಾಲಿನ ಕ್ರಿಯಾ ಯೋಜನೆಗೆ ಅನುಮೋದನೆ ನಿಡಿದರು. ಸಭೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…