Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಅತಿಥ ಗೃಹದ ಬಾಗಿಲಿಗೆ ಬೀಗ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಿಷ್ಟು?

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ವೇಳೆ ಅತಿಥಿ ಗೃಹಕ್ಕೆ ಬೀಗ ಹಾಕಲಾಗಿತ್ತು.

ಈ ವೇಳೆ ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ ಕುಳಿತ ಎಚ್‌ಡಿಕೆ 10 ನಿಮಿಷ ಕಾದ್ರೂ ಯಾವೊಬ್ಬ ಸಿಬ್ಬಂದಿ ಬಂದಿರಲಿಲ್ಲ. ಕೊನೆಗೆ ಮುಜುಗರಕ್ಕೊಳಗಾದ ಕುಮಾರಸ್ವಾಮಿ ಮೈಸೂರಿಗೆ ಕಾರಿನಲ್ಲಿ ತೆರಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಂಜನಗೂಡು ಶ್ರೀ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ನಂಜನಗೂಡಿನ ಸರ್ಕಾರಿ ಅತಿಥಿಗೃಹದಲ್ಲಿ ಲಘು ವಿಶ್ರಾಂತಿಗಾಗಿ ತೆರಳಿದಾಗ ಅತಿಥಿಗೃಹಕ್ಕೆ ಬೀಗ ಹಾಕಿರುವ ಬಗ್ಗೆ ಮಾದ್ಯಮಗಳಲ್ಲಿ ಸುದ್ದಿ ಬಿತ್ತರವಾಗಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಸದರಿ ವಿಷಯದ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸದರಿ ವಿಚಾರದಲ್ಲಿ ವಿಚಾರಣೆ ಮಾಡಲಾಗುತ್ತಿದ್ದು, ಕರ್ತವ್ಯ ಲೋಪದಡಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Tags: